ಕೇರಳದಲ್ಲಿ ಮೂವರು ಶಂಕಿತ ಮಾವೋವಾದಿಗಳ ಹತ್ಯೆ
ಕೇರಳದ ಪಲಕ್ಕಾಡ್ ನಲ್ಲಿ ಸೋಮವಾರ ಬೆಳಗ್ಗೆ ಪೊಲೀಸರ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ.

ಕೊಚ್ಚಿ: ಕೇರಳದ ಪಲಕ್ಕಾಡ್ ನಲ್ಲಿ ಸೋಮವಾರ ಬೆಳಗ್ಗೆ ಪೊಲೀಸರ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ.
ಅರಣ್ಯದಲ್ಲಿ ಮಾವೋಗಳು ಅವಿತುಕುಳಿತಿರುವ ಖಚಿತ ಮಾಹಿತಿ ಆಧರಿಸಿ ಪಲಕ್ಕಾಡ್ ನ ಮಂಚಕಟ್ಟಿಯಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ ಥಂಡರ್ ಬೊಲ್ಟ್ ಕಮಾಂಡೊ ಪಡೆ, ಮೂವರನ್ನು ಹತ್ಯೆ ಮಾಡಿದೆ ಎಂದು ಕೇರಳ ಪೊಲೀಸ್ ಮೂಲಗಳು ತಿಳಿಸಿವೆ.
ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಕೂಂಬಿಂಗ್ ಕಾರ್ಯಾಚರಣೆ ಮುಂದುವರೆದಿದ್ದು, ಪೊಲೀಸರು ಹತ್ಯೆಯಾದ ಮಾವೋವಾದಿಗಳ ಮಾಹಿತಿಯನ್ನು ಇನ್ನೂ ಬಹಿರಂಗಪಡಿಸಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


