ಬೆಳಕಿನ ಹಬ್ಬ ದೀಪಾವಳಿ ಸಂಭ್ರಮದಲ್ಲಿ ವಿರುಷ್ಕಾ ಜೋಡಿ!
ದೇಶದೆಲ್ಲೆಡೆ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆ ಮಾಡಿದೆ. ಅದರಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಕೂಡಾ ಬೆಳಕಿನ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದ್ದಾರೆ.

ಮುಂಬೈ: ದೇಶದೆಲ್ಲೆಡೆ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆ ಮಾಡಿದೆ. ಅದರಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಕೂಡಾ ಬೆಳಕಿನ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದ್ದಾರೆ.
ಬಾಂಗ್ಲಾ ಸರಣಿಯಿಂದ ಹೊರಗುಳಿದಿರುವ ವಿರಾಟ್ ಕೊಹ್ಲಿ, ಇದೀಗ ತಮ್ಮ ಸಮಯವನ್ನು ಕುಟುಂಬದೊಂದಿಗೆ ಎಂಜಯ್ ಮಾಡುತ್ತಿದ್ದಾರೆ.
ಸಾಂಪ್ರಾದಾಯಿಕ ಡ್ರೆಸ್ ನಲ್ಲಿ ವಿರುಷ್ಕಾ ಜೋಡಿ ದೀಪಾವಳಿ ಹಬ್ಬ ಆಚರಿಸಿದೆ. ಬಿಳಿ ಶರ್ಟ್ ಹಾಗೂ ಪ್ಯಾಂಟ್ ನೊಂದಿಗೆ ಕೊಹ್ಲಿ ಮಿಂಚುತ್ತಿದ್ದರೆ, ಅನುಷ್ಕಾ ಶರ್ಮಾ ಪ್ರಾಚೀನ ಆಭರಣಗಳ ಕಲಾಕೃತಿಗಳನ್ನು ಹೊಂದಿರುವ ಲೆಹೆಂಗಾವನ್ನು ಧರಿಸಿದ್ದಾರೆ.
ಈ ಪೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿ, ದೀಪಾವಳಿ ಶುಭಾಶಯ ಕೋರಿದ್ದಾರೆ. ಈ ಹಬ್ಬದ ದೀಪ ನಿಮ್ಮ ಬಾಳನ್ನೂ ಬೆಳಗಲಿ, ಜೊತೆಗೆ ಪ್ರತಿಯೊಬ್ಬರಿಗೂ ಪ್ರೀತಿ ಹಾಗೂ ಶಾಂತಿಯನ್ನು ತರಲಿ ಅಂತಾ ಬರೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


