ಶಿವಸೇನೆಯ 45 ಶಾಸಕರು ಫಡ್ನವಿಸ್ ಸಿಎಂ ಆಗಬೇಕು ಎನ್ನುತ್ತಿದ್ದಾರೆ: ಬಿಜೆಪಿ ಸಂಸದ
ಶಿವಸೇನೆಯ ಸುಮಾರು 45 ಶಾಸಕರು ಮಹಾರಾಷ್ಟ್ರದಲ್ಲಿ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಬೇಕು ಮತ್ತು ಮತ್ತೆ ದೇವೇಂದ್ರ ಫಡ್ನವಿಸ್ ಅವರೇ ಮುಖ್ಯಮಂತ್ರಿಯಾಗಬೇಕು ಎಂದು ಬಯಸುತ್ತಿರುವುದಾಗಿ...

ಮುಂಬೈ: ಶಿವಸೇನೆಯ ಸುಮಾರು 45 ಶಾಸಕರು ಮಹಾರಾಷ್ಟ್ರದಲ್ಲಿ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಬೇಕು ಮತ್ತು ಮತ್ತೆ ದೇವೇಂದ್ರ ಫಡ್ನವಿಸ್ ಅವರೇ ಮುಖ್ಯಮಂತ್ರಿಯಾಗಬೇಕು ಎಂದು ಬಯಸುತ್ತಿರುವುದಾಗಿ ಮಂಗಳವಾರ ಬಿಜೆಪಿ ರಾಜ್ಯಸಭಾ ಸದಸ್ಯ ಸಂಜಯ್ ಕಾಕಡೆ ಅವರು ಹೇಳಿದ್ದಾರೆ.
ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಆಡಳಿತರೂಢ ಬಿಜೆಪಿ - ಶಿವಸೇನೆ ನಡುವೆ ಹಗ್ಗ ಜಗ್ಗಾಟ ನಡೆದಿದ್ದು, ಶಿವಸೇನೆ ಪ್ರತಿಪಕ್ಷದಲ್ಲಿ ಕುಳಿತುಕೊಳ್ಳಲು ಬಯಸುವುದಿಲ್ಲ ಎಂದು ಕಾಕಡೆ ಹೇಳಿದ್ದಾರೆ.
56 ಶಿವಸೇನಾ ಶಾಸಕರ ಪೈಕಿ 45 ಶಾಸಕರು ಫಡ್ನವಿಸ್ ಅವರು ಮತ್ತೆ ಸಿಎಂ ಆಗಬೇಕು ಎಂದು ಬಯಸುತ್ತಿದ್ದಾರೆ. ನೀವು ಏನಾದರೂ ಮಾಡಿ ನಾವು ಮಾತ್ರ ಬಿಜೆಪಿ ಸರ್ಕಾರದಲ್ಲಿ ಭಾಗಿಯಾಗಬೇಕು ಎಂದು ಸೇನಾ ಶಾಸಕರು ಹೇಳಿರುವುದಾಗಿ ಕಾಕಡೆ ತಿಳಿಸಿದ್ದಾರೆ.
ಇತ್ತೀಚಿಗಷ್ಟೇ ನಡೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 105 ಹಾಗೂ ಶಿವಸೇನೆ 56 ಸ್ಥಾನ ಗೆದ್ದಿದ್ದು, ಈಗ ಅಧಿಕಾರ ಹಂಚಿಕೆ ಬಿಕ್ಕಟ್ಟು ಸೃಷ್ಟಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


