ಉಗ್ರ ಸಂಘಟನೆಗಳಿಗೆ ನೆರವು ನೀಡುವವರ ವಿರುದ್ಧ ಕಠಿಣ ಕ್ರಮ ಅತ್ಯಗತ್ಯ: ಪಾಕ್ ತಿವಿದ ಪ್ರಧಾನಿ ಮೋದಿ
ಉಗ್ರ ಸಂಘಟನೆಗಳಿಗೆ ನೆರವು ನೀಡುತ್ತಿರುವವಕ ವಿರುದ್ಧ ಕಠಿಣ ಕ್ರಮ ಅತ್ಯಗತ್ಯ ಎಂದು ಪ್ರಧಾನಿ ಮೋದಿ ಯೂರೋಪಿಯನ್ ನಿಯೋಗಕ್ಕೆ ಹೇಳಿದ್ದಾರೆ.

ನವದೆಹಲಿ: ಉಗ್ರ ಸಂಘಟನೆಗಳಿಗೆ ನೆರವು ನೀಡುತ್ತಿರುವವರ ವಿರುದ್ಧ ಕಠಿಣ ಕ್ರಮ ಅತ್ಯಗತ್ಯ ಎಂದು ಪ್ರಧಾನಿ ಮೋದಿ ಯೂರೋಪಿಯನ್ ನಿಯೋಗಕ್ಕೆ ಹೇಳಿದ್ದಾರೆ.
ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ ವಿಧಿ 370 ಅನ್ನು ರದ್ಧು ಮಾಡಿದ ಬಳಿಕ ಕಣಿವೆ ರಾಜ್ಯದಲ್ಲಿ ಹಿಂಸಾಚಾರ ಉಂಟಾಗಿದೆ ಎಂಬ ಸುದ್ದಿಗಳ ಹರಿದಾಡುತ್ತಿರುವಂತೆಯೇ ಇತ್ತ ಯೂರೋಪಿನ ಜನಪ್ರತಿನಿಧಿಗಳ ನಿಯೋಗವೊಂದು ಕಾಶ್ಮೀರಕ್ಕೆ ಭೇಟಿ ನೀಡಿದೆ.
ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿಯ ಅಧ್ಯಯನ ನಡೆಸಲು ಬಂದಿರುವ ಯೂರೋಪ್ ಒಕ್ಕೂಟದ 27 ಮಂದಿ ಸಂಸದರ ತಂಡ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರನ್ನು ಸೋಮವಾರ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ಯೂರೋಪ್ ಒಕ್ಕೂಟದ ಜನಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 'ಭಯೋತ್ಪಾದನೆಯನ್ನು ಬೆಂಬಲಿಸುವವರು ಮತ್ತು ಅದರ ಪ್ರಾಯೋಜಕರ ವಿರುದ್ಧ ತುರ್ತಾಗಿ ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ. ಭಯೋತ್ಪಾದನೆಯ ವಿರುದ್ಧ ಯಾವುದೇ ಮೃದು ಧೋರಣೆ ಅನುಸರಿಸಬಾರದು ಎಂದು ಹೇಳಿದರು.
ಆ ಮೂಲಕ ಪಾಕಿಸ್ತಾನದ ಹೆಸರು ಹೇಳಿದೇ ಪ್ರಧಾನಿ ಮೋದಿ ಪರೋಕ್ಷವಾಗಿ ಪಾಕಿಸ್ತಾನವನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


