ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ: ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ!
ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ವರದಿಯಾಗಿದ್ದು, ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭದ್ರತಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ವರದಿಯಾಗಿದ್ದು, ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭದ್ರತಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಇತ್ತೀಚಿನ ಮಾಹಿತಿಯ ಪ್ರಕಾರ ಈ ಘಟನೆಯಲ್ಲಿ ಯಾವುದೇ ಹಾನಿ ಅಥವಾ ಗಾಯಗಳು ಭದ್ರತಾಪಡೆಯ ಸಿಬ್ಬಂದಿಗಳಿಗೆ ಉಂಟಾಗಿಲ್ಲ. ಘಟನಾಸ್ಥಳದಲ್ಲಿ ಭದ್ರತಾಪಡೆ ಶೋಧಕಾರ್ಯಾಚರಣೆ ಪ್ರಾರಂಭಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾಪಡೆಗಳನ್ನು ಕರೆಸಲಾಗಿದೆ. ಯುರೋಪಿಯನ್ ಸಂಸತ್ ನ ನಿಯೋಗದ ಸದಸ್ಯರು ರಾಜ್ಯದ ಸ್ಥಿತಿಗತಿಗಳ ಬಗ್ಗೆ ವೀಕ್ಷಿಸಲು ಆಗಮಿಸಿದ ದಿನವೇ ಈ ಘಟನೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


