ಬಾಲಕ ಸುಜಿತ್ ಸಾವು ನೋವು ತಂದಿದೆ: ರಜನಿಕಾಂತ್
ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯ ನಡಕಟ್ಟುಪಟ್ಟಿ ಗ್ರಾಮದಲ್ಲಿ ತೆರೆದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ೨ ವರ್ಷದ ಬಾಲಕ ಸುಜಿತ್ ವಿಲ್ಸನ್ ಸಾವಿನ ಕುರಿತು ಖ್ಯಾತ ನಟ ರಜನಿಕಾಂತ್ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಚೆನ್ನೈ/ಬೆಂಗಳೂರು: ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯ ನಡಕಟ್ಟುಪಟ್ಟಿ ಗ್ರಾಮದಲ್ಲಿ ತೆರೆದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ೨ ವರ್ಷದ ಬಾಲಕ ಸುಜಿತ್ ವಿಲ್ಸನ್ ಸಾವಿನ ಕುರಿತು ಖ್ಯಾತ ನಟ ರಜನಿಕಾಂತ್ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
"ಪುಟ್ಟ ಬಾಲಕ ಸುಜಿತ್ ವಿಲ್ಸನ್ ಜೀವಂತ ಹೊರಬರದ ಸುದ್ದಿ ನಿಜಕ್ಕೂ ನೋವು ತಂದಿದೆ. ಆತನ ಆತ್ಮಕ್ಕೆ ಶಾಂತಿ ಸಿಗಲಿ, ತಂದೆ ತಾಯಿಗಳಿಗೆ ನೋವು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ" ಎಂದು ರಜನಿಕಾಂತ್ ಟ್ವೀಟ್ ಮಾಡಿದ್ದಾರೆ.
ಸತತ ೮೨ ಗಂಟೆಗಳ ರಕ್ಷಣಾ ಕಾರ್ಯ ವಿಫಲವಾಗಿದ್ದು, ಆತನ ಶವವನ್ನು ಮಂಗಳವಾರ ಹೊರತೆಗೆಯಲಾಗಿದೆ.
ಮಗು ಬದುಕಿ ಬರಲೆಂದು ಪ್ರಾರ್ಥಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಬಾಲಕನ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿದ್ದರು. ಆದರೆ ಎಲ್ಲ ಪರಿಶ್ರಮ ವ್ಯರ್ಥವಾಗಿದ್ದು, ಸುಜಿತ್ ದೇಹ ಕೊಳವೆ ಬಾವಿಯ ೭೦ ಅಡಿ ಆಳದಲ್ಲಿ ಕೊಳೆತ ಸ್ಥಿತಿಯಲ್ಲಿ ದೊರಕಿದ್ದು, ಪೋಷಕರಿಗೆ ಹಸ್ತಾಂತರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


