ತಮಿಳುನಾಡು: ಸತತ ಕಾರ್ಯಾಚರಣೆ ಹೊರತಾಗಿಯೂ ಬೋರ್ ವೆಲ್ ಗೆ ಬಿದ್ದಿದ್ದ ಬಾಲಕ ಸುಜಿತ್ ಸಾವು!
88 ಆಳದ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕನ ರಕ್ಷಣೆಗೆ ಕಳೆದ ಹಲವು ದಿನಗಳಿಂದ ನಡೆದಿದ್ದ ರಕ್ಷಣಾ ಕಾರ್ಯಾಚರಣೆ ವಿಫಲವಾಗಿದ್ದು, ಬಾಲಕ ಸುಜಿತ್ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಚೆನ್ನೈ: 88 ಆಳದ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕನ ರಕ್ಷಣೆಗೆ ಕಳೆದ ಹಲವು ದಿನಗಳಿಂದ ನಡೆದಿದ್ದ ರಕ್ಷಣಾ ಕಾರ್ಯಾಚರಣೆ ವಿಫಲವಾಗಿದ್ದು, ಬಾಲಕ ಸುಜಿತ್ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ತಮಿಳುನಾಡಿನ ತಿರುಚಿನಾಪಳ್ಳಿ ಸಮೀಪ ಶುಕ್ರವಾರ ಕೊಳವೆಬಾವಿಗೆ ಬಿದ್ದಿದ್ದ ಎರಡು ವರ್ಷದ ಸುಜೀತ್ ವಿಲ್ಸನ್ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.
ಸೋಮವಾರ ರಾತ್ರಿ 10.30ಕ್ಕೆ ಕೊಳವೆಬಾವಿಯಿಂದ ಕೆಟ್ಟ ವಾಸನೆ ಬರುತ್ತಿತ್ತು. ವೈದ್ಯರು, ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ಅವಲೋಕಿಸಿದರು. ಅಲ್ಲದೆ ಕಳೆದ 3 ದಿನಗಳಿಂದ ನಿರಂತರ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ ಬಾಲಕ ಸುಜಿತ್ ಸಾವನ್ನಪ್ಪಿದ್ದಾನೆ. ಕೊಳವೆಬಾವಿಯಲ್ಲಿ 88 ಅಡಿ ಆಳದಲ್ಲಿ ಬಾಲಕ ಸಿಲುಕಿದ್ದ. ಕಲ್ಮಣ್ಣು ಮತ್ತು ಮಳೆಯಿಂದಾಗಿ ಬಾಲಕನನ್ನು ರಕ್ಷಿಸುವ ಕಾರ್ಯ ವಿಫಲವಾಯಿತು.
ಪ್ರಸ್ತುತ ಸುಜಿತ್ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಘಟನಾ ಸ್ಥಳದಲ್ಲಿ ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ.
ನಡುಕಟ್ಟುಪಟ್ಟಿ ಸಮೀಪ ಮನೆಯಲ್ಲಿ ಆಡುತ್ತಿದ್ದ ಮಗು ಶುಕ್ರವಾರ ಸಂಜೆ ಕೊಳವೆಬಾವಿಗೆ ಬಿದ್ದಿತ್ತು. ಮಗುವಿನ ರಕ್ಷಣೆಗೆ ಅಗ್ಮಿ ಶಾಮಕದಳ, ಪೊಲೀಸ್ ಇಲಾಖೆ, ವಿಪತ್ತು ನಿರ್ವಹಣಾ ಸಿಬ್ಬಂದಿಗಳು ಸೇರಿದಂತೆ ಹಲವು ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಬಾಲಕ ಸುಜಿತ್ ಸುರಕ್ಷಿತವಾಗಿ ಹೊರಬರಲಿ ಎಂದು ಲಕ್ಷಾಂತರ ಪ್ರಾರ್ಥಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಮಗುವಿನ ಜೀವ ಉಳಿಯಲಿ ಎಂದು ಪ್ರಾರ್ಥಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


