ವೇದಿಕೆಯಿಂದ ಇಳಿದು ಹೋಗಿ ಮಹಿಳಾ ಭದ್ರತಾ ಸಿಬ್ಬಂದಿಯ ಆರೋಗ್ಯ ವಿಚಾರಿಸಿದ ರಾಷ್ಟ್ರಪತಿ ಕೋವಿಂದ್
ತಾವು ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ವೇಳೆ ಮಹಿಳಾ ಭದ್ರತಾ ಸಿಬ್ಬಂದಿ ತಲೆಸುತ್ತಿ ಬಿದ್ದಾಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ವೇದಿಕೆಯಿಂದ ಕೆಳಗಿಳಿದು ಅವರ ಆರೋಗ್ಯ ವಿಚಾರಿಸಿದ ಘಟನೆ ನಡೆದಿದೆ.

ನವದೆಹಲಿ; ತಾವು ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ವೇಳೆ ಮಹಿಳಾ ಭದ್ರತಾ ಸಿಬ್ಬಂದಿ ತಲೆಸುತ್ತಿ ಬಿದ್ದಾಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ವೇದಿಕೆಯಿಂದ ಕೆಳಗಿಳಿದು ಅವರ ಆರೋಗ್ಯ ವಿಚಾರಿಸಿದ ಘಟನೆ ನಡೆದಿದೆ.
ರಾಷ್ಟ್ರಪತಿಗಳು ಇಂದು ರಾಷ್ಟ್ರೀಯ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಿದ್ದ ವೇಳೆ ಈ ಘಟನೆ ನಡೆದಿದೆ.
ರಾಷ್ಟ್ರಪತಿಗಳು ವೇದಿಕೆಯಿಂದ ಕೆಳಗಿಳಿದು ಬರುತ್ತಿದ್ದಂತೆ ಅವರ ಜೊತೆಗೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಅವರ ಸಹಾಯಕ ಸಚಿವ ಅನುರಾಗ್ ಠಾಕೂರ್ ಸಹ ಇದ್ದರು.
ಮಹಿಳಾ ಸಿಬ್ಬಂದಿಯ ಆರೋಗ್ಯ ವಿಚಾರಿಸಿ ಅವರಿಗೇನು ತೊಂದರೆಯಾಗಿಲ್ಲ ಎಂದು ಖಚಿತವಾದ ನಂತರ ಕಾರ್ಯಕ್ರಮದ ಸ್ಥಳದಿಂದ ಹೊರಹೋದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


