ಭಾರತ ತೊರೆಯಲು ಸಿದ್ಧವಾದ ವೊಡಾಫೋನ್!?
ವಿದೇಶಿ ಟೆಲಿಕಾಂ ಸಂಸ್ಥೆ ವೊಡಾಫೋನ್ ಸಂಸ್ಥೆ ಭಾರತದಲ್ಲಿ ತನ್ನ ಉದ್ಯಮವನ್ನು ತೊರೆಯಲು ಸಜ್ಜುಗೊಂಡಿದೆ ಎಂಬ ಬಗ್ಗೆ ವರದಿಗಳು ಪ್ರಕಟವಾಗಿತ್ತು.

ನವದೆಹಲಿ: ವಿದೇಶಿ ಟೆಲಿಕಾಂ ಸಂಸ್ಥೆ ವೊಡಾಫೋನ್ ಸಂಸ್ಥೆ ಭಾರತದಲ್ಲಿ ತನ್ನ ಉದ್ಯಮವನ್ನು ತೊರೆಯಲು ಸಜ್ಜುಗೊಂಡಿದೆ ಎಂಬ ಬಗ್ಗೆ ವರದಿಗಳು ಪ್ರಕಟವಾಗಿತ್ತು.
ಐಎಎನ್ಎಸ್ ಈ ಬಗ್ಗೆ ವರದಿಪ್ರಕಟಿಸಿದೆ. ಮಾಧ್ಯಮ ಸಂಸ್ಥೆ ಕೇಳಿರುವ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ವೊಡಾಫೋನ್ ಸಂಸ್ಥೆ, ಭಾರತದ ವಹಿವಾಟುಗಳನ್ನು ಅಂತ್ಯಗೊಳಿಸುವ ವಿಚಾರ ಕೇವಲ ಊಹಾಪೋಹ ಎಂದು ಹೇಳಿದೆ.
ವೊಡಾಫೋನ್-ಐಡಿಯಾ ಜಂಟಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದು, ನಷ್ಟ ಎದುರಿಸುತ್ತಿದೆ, ಪ್ರತಿ ವರ್ಷವೂ ಲಕ್ಷಾಂತರ ಗ್ರಾಹಕರನ್ನು ಕಳೆದುಕೊಳ್ಳುತ್ತಿದೆ ಈ ಹಿನ್ನೆಲೆಯಲ್ಲಿ ವೊಡಾಫೋನ್ ಭಾರತದಲ್ಲಿನ ತನ್ನ ಉದ್ಯಮವನ್ನು ತೊರೆಯಲಿದೆ ಎಂಬ ವದಂತಿ ಹಬ್ಬಿತ್ತು. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ವೊಡಾಫೋನ್-ಐಡಿಯಾ ಸಂಸ್ಥೆ ಎಲ್ಲಾ ವದಂತಿಗಳನ್ನೂ ನಿರಾಕರಿಸಿದೆ.
ವೊಡಾಫೋನ್-ಐಡಿಯಾ ಸಂಸ್ಥೆ ತನಗೆ ಸಾಲ ನೀಡಿರುವ ಸಂಸ್ಥೆಗೆ ಸಾಲದ ಬಾಧ್ಯತೆಗಳನ್ನು ಮರುಹಂಚಿಕೆ ಮಾಡಬೇಕೆಂದು ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ವೋಡಾಫೋನ್ ಭಾರತ ತೊರೆಯಲು ಮುಂದಾಗಿದೆ ಎಂಬ ವದಂತಿ ಹಬ್ಬಿತ್ತು.
ಈ ಮಾಹಿತಿಯನ್ನು ತಳ್ಳಿಹಾಕಿರುವ ಸಂಸ್ಥೆ, ನಾವು ಯಾವುದೇ ಮನವಿಯನ್ನೂ ಯಾರಿಗೂ ಮಾಡಿಲ್ಲ. ಎಲ್ಲಾ ಸಾಲವನ್ನು ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡಲಿದ್ದೇವೆ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


