ಸರ್ದಾರ್ ಪಟೇಲ್ ಗೆ ಗೌರವ ನಮನ ಸಲ್ಲಿಸದ ಸೋನಿಯಾ, ರಾಹುಲ್ ವಿರುದ್ಧ ರೂಪಾನಿ ವಾಗ್ದಾಳಿ
ಸ್ವಾತಂತ್ರ್ಯ ಭಾರತದ ಮೊದಲ ಉಪ ಪ್ರಧಾನಿ ಸರ್ದಾರ್ ವಲ್ಲಭ್ ಬಾಯಿ ಪಟೇಲ್ ಅವರ 114ನೇ ಜನ್ಮ ವರ್ಷಾಚರಣೆ ಸಂದರ್ಭದಲ್ಲಿ ಅವರಿಗೆ ಗೌರವ ನಮನ ಸಲ್ಲಿಸದ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ವಾಗ್ದಾಳಿ ನಡೆಸಿದ್ದಾರೆ.

ಗಾಂಧಿನಗರ: ಸ್ವಾತಂತ್ರ್ಯ ಭಾರತದ ಮೊದಲ ಉಪ ಪ್ರಧಾನಿ ಸರ್ದಾರ್ ವಲ್ಲಭ್ ಬಾಯಿ ಪಟೇಲ್ ಅವರ 114ನೇ ಜನ್ಮ ವರ್ಷಾಚರಣೆ ಸಂದರ್ಭದಲ್ಲಿ ಅವರಿಗೆ ಗೌರವ ನಮನ ಸಲ್ಲಿಸದ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ವಾಗ್ದಾಳಿ ನಡೆಸಿದ್ದಾರೆ.
ಇಡೀ ದೇಶಾದ್ಯಂತ ಸರ್ದಾರ್ ವಲ್ಲಭ್ ಬಾಯಿ ಪಟೇಲ್ ಅವರ ಜನ್ಮ ದಿನಾಚರಣೆಯಲ್ಲಿ ಮುಳುಗಿರುವಾಗ ಸೋನಿಯಾ ಹಾಗೂ ರಾಹುಲ್ ಗಾಂಧಿ, ದೇಶದ ಉಕ್ಕಿನ ಮನುಷ್ಯನಿಗೆ ಕನಿಷ್ಠ ಗೌರವ ನೀಡದಿರುವುದು ದು:ಖಕರವಾಗಿದೆ ಎಂದು ರೂಪಾನಿ ಟ್ವೀಟ್ ಮಾಡಿದ್ದಾರೆ.
ಇದಕ್ಕೂ ಮುನ್ನ ಫೇಸ್ ಬುಕ್ ಪೇಜ್ ಮೂಲಕ ರಾಹುಲ್ ಗಾಂಧಿ, ಸರ್ದಾರ್ ವಲ್ಲಭ್ ಬಾಯಿ ಪಟೇಲ್ ಅವರಿಗೆ ನಮನ ಸಲ್ಲಿಸಿದ್ದರು.
ಭಾರತವನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದೇಶದ ಮೊದಲ ಉಪ ಪ್ರಧಾನಿ ಹಾಗೂ ಗೃಹ ಸಚಿವ ಸರ್ದಾರ್ ವಲ್ಲಭ್ ಬಾಯಿ ಪಟೇಲ್ ಅವರನ್ನು ದೇಶಾದ್ಯಂತ ಸ್ಮರಿಸಲಾಯಿತು. ಅವರ ಜನ್ಮ ದಿನವನ್ನು 2014 ಅಕ್ಟೋಬರ್ 31ರಿಂದ ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


