ದೇಶ

ದೇಶದ ಆರ್ಥಿಕ ಕುಸಿತಕ್ಕೆ ಮೋದಿ ಸರ್ಕಾರದ ಕೆಟ್ಟ ನಿರ್ವಹಣೆ ಕಾರಣ: ಮನಮೋಹನ್ ಸಿಂಗ್

ದೇಶದ ಆರ್ಥಿಕ ಕುಸಿತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಕೆಟ್ಟ ನಿರ್ವಹಣೆಯೇ ಕಾರಣ ಎಂದು ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರು ವಾಗ್ದಾಳಿ ನಡೆಸಿದ್ದಾರೆ.

ದೇಶದ ಆರ್ಥಿಕ ಕುಸಿತಕ್ಕೆ ಮೋದಿ ಸರ್ಕಾರದ ಕೆಟ್ಟ ನಿರ್ವಹಣೆ ಕಾರಣ: ಮನಮೋಹನ್ ಸಿಂಗ್
ಮನಮೋಹನ್ ಸಿಂಗ್
Published On :

ನವದೆಹಲಿ: ದೇಶದ ಆರ್ಥಿಕ ಕುಸಿತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಕೆಟ್ಟ ನಿರ್ವಹಣೆಯೇ ಕಾರಣ ಎಂದು ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರು ವಾಗ್ದಾಳಿ ನಡೆಸಿದ್ದಾರೆ. 

ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ಅವರು, ದೇಶದಲ್ಲಿ ತಾಂಡವವಾಡುತ್ತಿರುವ ಆರ್ಥಿಕ ಕುಸಿತಕ್ಕೆ ಮೋದಿ ಸರ್ಕಾರದ ಸರ್ವಾಂಗೀಣ ಕಳಪೆ ನಿರ್ವಹಣೆಯೇ ಕಾರಣವಾಗಿದೆ. ಕೇಂದ್ರ ಸರ್ಕಾರ ಎಲ್ಲಾ ರಾಜಕೀಯ ಹಗೆತನವನ್ನು ಬದಿಗಿಟ್ಟು ಮನುಷ್ಯ ನಿರ್ಮಿತ ಈ ಬಿಕ್ಕಟ್ಟಿನಿಂದ ಹೊರಬರುವ ಪ್ರಯತ್ನಗಳನ್ನು ಮಾಡಬೇಕಿದೆ ಎಂದು ಹೇಳಿದ್ದಾರೆ. 

ದೇಶದ ಇಂದಿನ ಆರ್ಥಿಕ ಸ್ಥಿತಿಗತಿ ತೀವ್ರ ಚಿಂತಾಜನಕ ಸ್ಥಿತಿಯನ್ನು ತಲುಪಿದೆ. ಕಡೆಯ ತ್ರೈಮಾಸಿಕ ಜಿಡಿಪಿ ಬೆಳವಣಿಗೆಯ ದರ ಶೇ.5 ರಷ್ಟಕ್ಕೆ ಕುಸಿದಿರುವುದು ನಾವು ದೀರ್ಘಕಾಲದ ನಿಧಾನಗತಿಯ ಮಧ್ಯದಲ್ಲಿದ್ದೇವೆಂಬುದನ್ನು ಸೂಚಿಸುತ್ತಿದೆ. ಭಾರತ ಹೆಚ್ಚು ವೇಗವಾಗಿ ಬೆಳೆಯುವಂತಹ ಸಾಮರ್ಥ್ಯವನ್ನು ಹೊಂದಿದೆ. ಆದರೆ, ಮೋದಿ ಸರ್ಕಾರದ ಕಳಪೆ ನಿರ್ವಹಣೆ ಆರ್ಥಿಕ ಹಿಂಜರಿತಕ್ಕೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ. 

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.