ಕುಲಭೂಷಣ್ ಜಾಧವ್ ಭೇಟಿ ಮಾಡಲು ಭಾರತೀಯ ರಾಯಭಾರಿ ಅಧಿಕಾರಿಗಳಿಗೆ ಅವಕಾಶ- ಪಾಕಿಸ್ತಾನ
ಬೇಹುಗಾರಿಕೆ ಆರೋಪದಲ್ಲಿ ಪಾಕಿಸ್ತಾನದ ಜೈಲಿನಲ್ಲಿರುವ ನೌಕಾಪಡೆ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಭೇಟಿ ಮಾಡಲು ನಾಳೆ ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳಿಗೆ ಅವಕಾಶ ನೀಡುವುದಾಗಿ ಪಾಕಿಸ್ತಾನ ತಿಳಿಸಿದೆ.

ನವದೆಹಲಿ: ಬೇಹುಗಾರಿಕೆ ಆರೋಪದಲ್ಲಿ ಪಾಕಿಸ್ತಾನದ ಜೈಲಿನಲ್ಲಿರುವ ನೌಕಾಪಡೆ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಭೇಟಿ ಮಾಡಲು ನಾಳೆ ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳಿಗೆ ಅವಕಾಶ ನೀಡುವುದಾಗಿ ಪಾಕಿಸ್ತಾನ ತಿಳಿಸಿದೆ.
ಪಾಕಿಸ್ತಾನದ ವಿದೇಶಾಂಗ ಕಚೇರಿಯ ಅಧಿಕೃತ ಟ್ವೀಟ್ ಮೂಲಕ ಈ ಮಾಹಿತಿಯನ್ನು ನೀಡಿದೆ. ವಿಯನ್ನಾ ಒಪ್ಪಂದ, ಅಂತಾರಾಷ್ಟ್ರೀಯ ನ್ಯಾಯಾಲಯದ ತೀರ್ಪು ಮತ್ತು ಪಾಕಿಸ್ತಾನದ ಕಾನೂನಿಗನುಗುಣವಾಗಿ ಸೋಮವಾರ ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳು ಭೇಟಿ ಮಾಡಲು ಅವಕಾಶ ನೀಡುವುದಾಗಿ ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಡಾ. ಮೊಹಮ್ಮದ್ ಪೈಸಲ್ ಟ್ವೀಟ್ ಮಾಡಿದ್ದಾರೆ.
ಜುಲೈ 17ರಂದು ಜಾಧವ್‌ಗೆ ವಿಧಿಸಿರುವ ಗಲ್ಲುಶಿಕ್ಷೆ ತೀರ್ಪನ್ನು ಅಮಾನತು ಮಾಡಿದ ಅಂತಾರಾಷ್ಟ್ರೀಯ ನ್ಯಾಯಾಲಯ, ಜಾಧವ್ ಅವರನ್ನು ಭೇಟಿ ಮಾಡಲು ಮತ್ತು ಅವರು ಕಾನೂನಾತ್ಮಕ ನೆರವು ಒದಗಿಸಲು ಭಾರತದ ರಾಜತಾಂತ್ರಿಕರಿಗೆ ಅವಕಾಶ ನೀಡುವಂತೆ ಆದೇಶ ಹೊರಡಿಸಿತ್ತು. ಅಷ್ಟೆ ಅಲ್ಲದೆ, 42 ಪುಟಗಳ ತೀರ್ಪುನಲ್ಲಿ ವಿಯೆನ್ನಾ ಒಪ್ಪಂದವನ್ನು ಪಾಕಿಸ್ತಾನ ಉಲ್ಲಂಘಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿತ್ತು.
ಇಲ್ಲಿಯವರೆಗೂ ಪಾಕ್ ಸರಕಾರದ ಪ್ರಸ್ತಾಪಕ್ಕೆ ಭಾರತ ಸರಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಪಾಕಿಸ್ತಾನದ ಈ ಪ್ರಸ್ತಾಪವನ್ನು ಪರಿಶೀಲಿಸುತ್ತಿರುವ ಭಾರತ, ಕಾನ್ಸುಲರ್ ಆಕ್ಸಸ್ ತೆಗೆದುಕೊಳ್ಳುತ್ತದೆಯೋ, ಇಲ್ಲವೋ ಎನ್ನುವುದು ನಾಳೆ ತಿಳಿಯಲಿದೆ. ಮರಣದಂಡನೆ ಶಿಕ್ಷೆ ವಿಧಿಸಿದ ಬಳಿಕ ಇದೇ ಮೊದಲ ಬಾರಿಗೆ ಕುಲಭೂಷಣ್ ಭೇಟಿಗೆ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳಿಗೆ ಪಾಕಿಸ್ತಾನ ಅವಕಾಶ ನೀಡುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


