ದೇಶ

ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಕಲ್ಲು ತೂರಾಟ: ಓರ್ವ ವ್ಯಕ್ತಿಗೆ ಗಂಭೀರ ಗಾಯ: ವಾರದಲ್ಲಿ 2ನೇ ಘಟನೆ  

ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಮತ್ತೆ ಕಲ್ಲು ತೂರಾಟ ನಡೆದಿದ್ದು, ಓರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ.

ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಕಲ್ಲು ತೂರಾಟ: ಓರ್ವ ವ್ಯಕ್ತಿಗೆ ಗಂಭೀರ ಗಾಯ: ವಾರದಲ್ಲಿ 2ನೇ ಘಟನೆ  
ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಕಲ್ಲು ತೂರಾಟ: ಓರ್ವ ವ್ಯಕ್ತಿಗೆ ಗಂಭೀರ ಗಾಯ: ವಾರದಲ್ಲಿ 2ನೇ ಘಟನೆ
Published On :

ಶ್ರೀನಗರ: ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಮತ್ತೆ ಕಲ್ಲು ತೂರಾಟ ನಡೆದಿದ್ದು, ಓರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ. 

ವಾರದಲ್ಲಿ ಎರಡನೇ ಘಟನೆ ಇದಾಗಿದ್ದು, ತೋಟದಲ್ಲಿ ಅವಿತಿದ್ದ ಯುವಕನೋರ್ವ ಈ ಕೃತ್ಯ ಎಸಗಿದ್ದಾನೆ. ಗಾಯಗೊಂಡ ವ್ಯಕ್ತಿ ಮನೆಗೆ ವಾಪಸ್ಸಾಗುತ್ತಿದ್ದಾಗ ಕಲ್ಲೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದು, ಶ್ರೀನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಇದಕ್ಕೂ ಮುನ್ನ ಆ.25 ರಂದು ನೂರ್ ಅಹ್ಮದ್ ಟ್ರಕ್ ಡ್ರೈವರ್ ಕಲ್ಲು ತೂರಾಟದಿಂದ ಮೃತಪಟ್ಟಿದ್ದರು. ಭೀಜ್‌ಬೆರಾ ಪ್ರದೇಶದಲ್ಲಿ ಈ ಘಟನೆ ನಡೆದಿತ್ತು. ಘಟನೆ ಬಗ್ಗೆ ಮಾಹಿತಿ ನೀಡಿದ್ದ ಪೊಲೀಸರು ಟ್ರಕ್ ನ್ನು ಸೇನಾ ವಾಹನ ಎಂದು ಭಾವಿಸಿದ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು ಎಂದು ಹೇಳಿದ್ದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.