ನಿರ್ವಸಿತರ ಪುನರ್ವಸತಿಗೆ ಒತ್ತಾಯಿಸಿ ಉಪವಾಸ: ಮೇಧಾ ಪಾಟ್ಕರ್ ಆರೋಗ್ಯದಲ್ಲಿ ಏರುಪೇರು
ಸರ್ದಾರ್ ಸರೋವರ್ ಅಣೆಕಟ್ಟು ಯೋಜನೆಯಿಂದ ನಿರ್ವಸಿತರಾದವರಿಗೆ ಪುನರ್ವಸತಿಗಾಗಿ ಕಳೆದ ಎಂಟು ದಿನಗಳಿಂದ ಉಪವಾಸ ನಡೆಸಿರುವ ನರ್ಮದಾ ಬಚಾವೊ ಆಂಡೋಲನ್ (ಎನ್‌ಬಿಎ) ನಾಯಕಿ ಮೇಧಾ ಪಾಟ್ಕರ್ ಅವರ ಆರೋಗ್ಯ ಹದಗೆಟ್ಟಿದೆ ಎಂದು ಅವರ ಕೆಲವು ಸಹ ಪ್ರತಿಭಟನಾಕಾರರು ಹೇಳಿದ್ದಾರೆ.

ಸರ್ದಾರ್ ಸರೋವರ್ ಅಣೆಕಟ್ಟು ಯೋಜನೆಯಿಂದ ನಿರ್ವಸಿತರಾದವರಿಗೆ ಪುನರ್ವಸತಿಗಾಗಿ ಕಳೆದ ಎಂಟು ದಿನಗಳಿಂದ ಉಪವಾಸ ನಡೆಸಿರುವ ನರ್ಮದಾ ಬಚಾವೊ ಆಂಡೋಲನ್ (ಎನ್‌ಬಿಎ) ನಾಯಕಿ ಮೇಧಾ ಪಾಟ್ಕರ್ ಅವರ ಆರೋಗ್ಯ ಹದಗೆಟ್ಟಿದೆ ಎಂದು ಅವರ ಕೆಲವು ಸಹ ಪ್ರತಿಭಟನಾಕಾರರು ಹೇಳಿದ್ದಾರೆ.
ಆದರೆ ಪಾಟ್ಕರ್ ಆರೋಗ್ಯ ಸ್ಥಿತಿಯನ್ನು ಖಚಿತಪಡಿಸಲು ಸಾಧ್ಯವಿಲ್ಲ ಎಂದು ಜಿಲ್ಲೆಯ ಅಧಿಕಾರಿಗಳು ತಿಳಿಸಿದ್ದಾರೆ, ಅಲ್ಲದೆ ಆಕೆ ವೈದ್ಯರ ಪರೀಕ್ಷೆಗೆ ಸಹ ಒಪ್ಪುತ್ತಿಲ್ಲವೆನ್ನಲಾಗಿದೆ.
"ಪಾಟ್ಕರ್ ವೈದ್ಯಕೀಯ ಪರೀಕ್ಷೆಗೆ ಒಲಪಡಲು ನಿರಾಕರಿಸುತ್ತಿದ್ದು ಅವರ ಆರೋಗ್ಯ ಸ್ಥಿತಿಯ ಬಗ್ಗೆ ನಾನು ಪ್ರತಿಕ್ರಿಯಿಸಲು ಸಾಧ್ಯವಿಲ್ಲ" ಎಂದು ಜಿಲ್ಲಾ ಕಲೆಕ್ಟರ್ ಅಮಿತ್ ತೋಮರ್ ಪಿಟಿಐಗೆ ತಿಳಿಸಿದ್ದಾರೆ. ""ನಾನು ಅವರ ಆರೋಗ್ಯ ಪರೀಕ್ಷೆಗಾಗಿ ಪ್ರತಿದಿನ ಅಧಿಕಾರಿಗಳನ್ನು ಕಳುಹಿಸುತ್ತಿದ್ದೇನೆ ಆದರೆ ಅವರು ಪರೀಕ್ಷೆಗೆ ಒಳಪಡಲು ನಿರಾಕರಿಸುತ್ತಿದ್ದಾರೆ" ಅವರು ಹೇಳಿದರು.
ಮೇಧಾ ಪಾಟ್ಕರ್ ಪ್ರತಿಭಟನೆ ನಡೆಸುತ್ತಿರುವ ಪ್ರದೇಶವು ಸರ್ದಾರ್ ಸರೋವರ್ ಅಣೆಕಟ್ಟಿನ ಜಲಾನಯನ ಪ್ರದೇಶದ ಭಾಗವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


