ಚಂದ್ರಯಾನ-2; ಇಸ್ರೋ ಐತಿಹಾಸಿಕ ಸಾಧನೆ, ಆರ್ಬಿಟರ್ ನಿಂದ ಯಶಸ್ವಿಯಾಗಿ ಬೇರ್ಪಟ್ಟ ವಿಕ್ರಮ್ ಲ್ಯಾಂಡರ್!
ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-2 ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದು, ಚಂದ್ರಯಾನ 2 ಆರ್ಬಿಟರ್ ನಿಂದ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಬೇರ್ಪಟ್ಟಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ನವದೆಹಲಿ: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-2 ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದು, ಚಂದ್ರಯಾನ 2 ಆರ್ಬಿಟರ್ ನಿಂದ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಬೇರ್ಪಟ್ಟಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
ಈ ಕುರಿತಂತೆ ಇಸ್ರೋ ತನ್ನ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಇಂದು ಮಧ್ಯಾಹ್ನ 1.15ರಲ್ಲಿ ವಿಕ್ರಮ್ ಲ್ಯಾಂಡರ್ ಚಂದ್ರಯಾನ2 ಆರ್ಬಿಟರ್ ನಿಂದ ಬೇರ್ಪಟ್ಟಿದೆ. ಆ ಮೂಲಕ ಚಂದ್ರನ ಮೇಲ್ಮೈ ಮೇಲೆ ವಿಕ್ರಮ್ ಲ್ಯಾಂಡರ್ ಇಳಿಯಲು ಕ್ಷಣಗಣನೆ ಆರಂಭವಾಗಿದೆ. ಈ ಕುರಿತಂತೆ ಮಾಹಿತಿ ನೀಡಿರುವ ವಿಜ್ಞಾನಿಗಳು, ವಿಕ್ರಮ್ ಲ್ಯಾಂಡರ್ ಸೆಪ್ಟೆಂಬರ್ 2 ರಂದು ಚಂದ್ರಯಾನ -2 ರಿಂದ ಬೇರ್ಪಟ್ಟರು, ಸೆಪ್ಟೆಂಬರ್ 7 ರಂದು ಮಧ್ಯಾಹ್ನ 1:55 ಕ್ಕೆ ಚಂದ್ರನ ಮೇಲೆ ಇಳಿಯಲಿದೆ ಎಂದು ಹೇಳಿದ್ದಾರೆ.
ಅಂತೆಯೇ ತಾತ್ಕಾಲಿಕ ಯೋಜನೆಯ ಪ್ರಕಾರ, ಸೆಪ್ಟೆಂಬರ್ 3ರಂದು ಮಂಗಳವಾರ ಮೂರು ಸೆಕೆಂಡುಗಳ ಕಾಲ ಸಣ್ಣ ಪ್ರಮಾಣದ ಕಾರ್ಯಾಚರಣೆ ನಡೆಸಲಿದ್ದು, ಲ್ಯಾಂಡರ್ ನ ವ್ಯವಸ್ಥೆ ಸಹಜವಾಗಿ ನಡೆಯುತ್ತಿದೆಯೇ ಎಂಬುದನ್ನು 24 ಗಂಟೆಗಳ ಕಾಲ ಪರಿಶೀಲಿಸಲಾಗುತ್ತಿದೆ. ಸೆಪ್ಟೆಂಬರ್ 7 ರಂದು ಮಧ್ಯಾಹ್ನ 1:55 ಕ್ಕೆ ಲ್ಯಾಂಡರ್ ಚಂದ್ರನ ಮೇಲೆ ಇಳಿಯಲಿದೆ. ಸೆಪ್ಟೆಂಬರ್ 7, 2019 ರಂದು ಚಂದ್ರನ ಮೇಲ್ಮೈಗೆ ಇಳಿಯುವ ಮೊದಲು, ಭೂಮಿಯಿಂದ ಎರಡು ಆಜ್ಞೆಗಳನ್ನು ನೀಡಲಾಗುವುದು, ಇದರಿಂದ ಲ್ಯಾಂಡರ್ ನ ವೇಗ ಮತ್ತು ದಿಕ್ಕನ್ನು ಸುಧಾರಿಸಬಹುದು ಮತ್ತು ಅದು ಮೇಲ್ಮೈಯಲ್ಲಿ ಲಘುವಾಗಿ ಇಳಿಯುತ್ತದೆ ಎಂದು ಇಸ್ರೋ ಅಧ್ಯಕ್ಷ ಡಾ.ಕೆ.ಶಿವನ್ ಹೇಳಿದ್ದಾರೆ.
ಈ ಕಾರ್ಯಾಚರಣೆಯ ಯಶಸ್ಸು ಭಾರತವನ್ನು "ಅಮೆರಿಕ, ಚೀನಾ ಮತ್ತು ರಷ್ಯಾದ ನಂತರ ಚಂದ್ರನ ಮೇಲ್ಮೈಯಲ್ಲಿ ಇಳಿಯುವ ನಾಲ್ಕನೇ ರಾಷ್ಟ್ರವಾಗಿ ಮತ್ತು ಚಂದ್ರನ ಮೇಲ್ಮೈಯ ದಕ್ಷಿಣ ಧ್ರುವದಲ್ಲಿ ಇಳಿಯುವ ಮೊದಲ ರಾಷ್ಟ್ರವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


