ದೇಶ

ಉಗ್ರಗಾಮಿಗಳಿಗೆ ಪಾಕಿಸ್ತಾನ ಬಹಿರಂಗ ಬೆಂಬಲ, ಸಂಧಾನ ಮಾತುಕತೆ ಅಸಾಧ್ಯ: ಎಸ್ ಜೈಶಂಕರ್ 

ಪಾಕಿಸ್ತಾನ ಬಹಿರಂಗವಾಗಿ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುತ್ತಿದ್ದು, ಭಯೋತ್ಪಾದಕ ಗುಂಪುಗಳನ್ನು ಹುಟ್ಟುಹಾಕುವುದು ಮತ್ತು ಭಯೋತ್ಪಾದಕ ಸಂಘಟನೆಗಳಿಗೆ ಹಣಕಾಸಿನ ನೆರವು ನೀಡುವುದನ್ನು ಪಾಕಿಸ್ತಾನ ನಿಲ್ಲಿಸುವವರೆಗೆ ಆ ದೇಶದೊಂದಿಗೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

ಉಗ್ರಗಾಮಿಗಳಿಗೆ ಪಾಕಿಸ್ತಾನ ಬಹಿರಂಗ ಬೆಂಬಲ, ಸಂಧಾನ ಮಾತುಕತೆ ಅಸಾಧ್ಯ: ಎಸ್ ಜೈಶಂಕರ್ 
ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಎಸ್ ಜೈಶಂಕರ್
Published On :

ಬ್ರುಸೆಲ್: ಪಾಕಿಸ್ತಾನ ಬಹಿರಂಗವಾಗಿ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುತ್ತಿದ್ದು, ಭಯೋತ್ಪಾದಕ ಗುಂಪುಗಳನ್ನು ಹುಟ್ಟುಹಾಕುವುದು ಮತ್ತು ಅಂತಹ ಸಂಘಟನೆಗಳಿಗೆ ಹಣಕಾಸಿನ ನೆರವು ನೀಡುವುದನ್ನು ನಿಲ್ಲಿಸುವವರೆಗೆ ಆ ದೇಶದೊಂದಿಗೆ ಸಂಧಾನ ಮಾತುಕತೆಯ ಪ್ರಶ್ನೆಯೇ ಇಲ್ಲ ಎಂದು ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.


ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯಲ್ಲಿ ಕಾಶ್ಮೀರದ ಬಗ್ಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಬರೆದ ಅಭಿಪ್ರಾಯದ ಬಗ್ಗೆ ಜೈಶಂಕರ್ ಪ್ರತಿಕ್ರಿಯಿಸಿದ್ದಾರೆ.ದಕ್ಷಿಣ ಏಷ್ಯಾದ ಮೇಲೆ ಪರಮಾಣುವಿನ ಕರಿನೆರಳು ಬೀಳುತ್ತಿರುವ ಸಂದರ್ಭದಲ್ಲಿ ಕಾಶ್ಮೀರ ವಿವಾದ ಕುರಿತು ಭಾರತದೊಂದಿಗೆ ತುರ್ತು ಮಾತುಕತೆ ನಡೆಸುವ ಅಗತ್ಯವಿದೆ ಎಂದು ಹೇಳಿದರು.


ಅವರು ಬ್ರುಸೆಲ್ ನಲ್ಲಿ 'ಪೊಲಿಟಿಕೊ'ಗೆ ನೀಡಿದ ಸಂದರ್ಶನದಲ್ಲಿ, ಇಮ್ರಾನ್ ಖಾನ್ ಅವರು ಬರೆದ ಅಭಿಪ್ರಾಯವನ್ನು ನಾನು ಓದಿಲ್ಲ ಆದರೆ, ಪಾಕಿಸ್ತಾನ ಬಹಿರಂಗವಾಗಿಯೇ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುತ್ತಿರುವಾಗ ಅದರೊಂದಿಗೆ ಮಾತುಕತೆ ಆರಂಭ ಸಾಧ್ಯವೇ ಇಲ್ಲ, ಪಾಕಿಸ್ತಾನದ ಒಂದು ಮೂಲೆಯ ಕತ್ತಲೆಯಲ್ಲಿ ಕುಳಿತುಕೊಂಡು ಭಯೋತ್ಪಾದನೆ ಆರಂಭಿಸುವುದಲ್ಲ. ಅದು ಎಲ್ಲರಿಗೂ ಗೊತ್ತಾಗುವಂತೆಯೇ ಬಹಿರಂಗವಾಗಿಯೇ ನಡೆಯುತ್ತಿದೆ ಎಂದು ಟೀಕಿಸಿದರು.


ಗಡಿ ವಿವಾದ ಮತ್ತು ಕಾಶ್ಮೀರ ವಿಚಾರದಲ್ಲಿ ಭಾರತ ಮತ್ತು ಪಾಕಿಸ್ತಾನ ದೇಶಗಳು ಮಾತುಕತೆ ನಡೆಸಿ ಸೌಹಾರ್ದಯುತವಾಗಿ ವಾದ ಬಗೆಹರಿಸಬೇಕೆಂದು ಹಿಂದಿನಿಂದಲೂ ಕೇಳಿಬರುತ್ತಿರುವ ಮಾತಾಗಿದೆ.ಆದರೆ ಮಾತುಕತೆ ಮತ್ತು ಭಯೋತ್ಪಾದನೆ ಒಟ್ಟೊಟ್ಟಿಗೆ ಹೋಗಲು ಸಾಧ್ಯವಿಲ್ಲ ಎಂದು ಭಾರತ, 2016ರಲ್ಲಿ ಪಠಾಣ್ ಕೋಟ್ ನ ವಾಯುನೆಲೆ ಮೇಲೆ ದಾಳಿಯಾದ ಮೇಲೆ ನಿರಾಕರಿಸುತ್ತಲೇ ಬಂದಿದೆ.


ಸಂವಿಧಾನ ವಿಧಿ 370ನ್ನು ರದ್ದುಪಡಿಸಿದ ನಂತರ ಕಾಶ್ಮೀರ ಕಣಿವೆಯಲ್ಲಿ ಹೇರಲಾಗಿದ್ದ ನಿರ್ಬಂಧವನ್ನು ಮುಂದಿನ ದಿನಗಳಲ್ಲಿ ಪರಿಸ್ಥಿತಿ ನೋಡಿಕೊಂಡು ಸಡಿಲಗೊಳಿಸಲಾಗುವುದು ಎಂದು ಜೈಶಂಕರ್ ಹೇಳಿದರು.ಭಯೋತ್ಪಾದಕರ ಮಧ್ಯೆ ಸಂಪರ್ಕ ಕಡಿತ ಮಾಡಬೇಕಾದರೆ ಮತ್ತು ಹಿಂಸಾಚಾರದಲ್ಲಿ ತೊಡಗಲೆತ್ನಿಸುವ ಜನರ ಮಧ್ಯೆ ಸಂಪರ್ಕ ಕಡಿತ ಮಾಡಲು ಟೆಲಿಫೋನ್, ಇಂಟರ್ನೆಟ್ ಮೊದಲಾದ ಸಂಪರ್ಕ ಸಾಧನಗಳನ್ನು ಕಡಿತ ಮಾಡಬೇಕು, ಆದರೆ ಇದರಿಂದ ಸಾಮಾನ್ಯ ಜನತೆಗೆ ತೊಂದರೆಯಾಗುವುದಿಲ್ಲವೇ ಎಂದು ಕೇಳಿದರು.

 ಮುಂದಿನ ದಿನಗಳಲ್ಲಿ ಕಾಶ್ಮೀರ ಪರಿಸ್ಥಿತಿ ನೋಡಿಕೊಂಡು ಹಂತಹಂತವಾಗಿ ನಿರ್ಬಂಧಗಳನ್ನು ಸಡಿಲಗೊಳಿಸಲಾಗುವುದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.