ಕೇರಳ, ತೆಲಂಗಾಣ ಸೇರಿ 5 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ
ಮಹತ್ವದ ಬೆಳವಣಿಗೆಯಲ್ಲಿ ತೆಲಂಗಾಣ, ಕೇರಳ, ಹಿಮಾಚಲ ಪ್ರದೇಶ ಮಹಾರಾಷ್ಟ್ರ ರಾಜಸ್ಥಾನ ಸೇರದಿಂತೆ ಒಟ್ಟು 5 ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ತೆಲಂಗಾಣ, ಕೇರಳ, ಹಿಮಾಚಲ ಪ್ರದೇಶ ಮಹಾರಾಷ್ಟ್ರ ರಾಜಸ್ಥಾನ ಸೇರದಿಂತೆ ಒಟ್ಟು 5 ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ತಮಿಳುನಾಡು ರಾಜ್ಯ ಬಿಜೆಪಿ ಮುಖ್ಯಸ್ಥೆ ತಮಿಳುಸಾಯಿ ಸೌಂದರರಾಜನ್ ಅವರನ್ನು ತೆಲಂಗಾಣ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದ್ದು, ಮಾಜಿ ಕೇಂದ್ರ ಸಚಿವ ಬಂಡಾರು ದತ್ತಾತ್ರೇಯ ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಹಿಮಾಚಲ ಪ್ರದೇಶದ ರಾಜ್ಯಪಾಲರಾದ ಕಲ್ರಾಜ್ ಮಿಶ್ರಾ ಅವರನ್ನುರಾಜಸ್ಥಾನದ ರಾಜ್ಯಪಾಲರನ್ನಾಗಿ ವರ್ಗಾವಣೆ ಮಾಡಲಾಗಿದೆ. ಇನ್ನು ಮಹಾರಾಷ್ಟ್ರದ ರಾಜ್ಯಪಾಲರಾಗಿ ಭಗತ್ ಸಿಂಗ್ ಕೋಶ್ಯರಿ ಅವರನ್ನು ನೇಮಕ ಮಾಡಲಾಗಿದ್ದು, ಕೇರಳ ರಾಜ್ಯಪಾಲರಾಗಿ ಆರಿಫ್ ಮೊಹ್ಮದ್ ಖಾನ್ ಆಯ್ಕೆಯಾಗಿದ್ದಾರೆ. 5 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆದೇಶ ಹೊರಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


