ಸೆಪ್ಟೆಂಬರ್ 13 ರವರೆಗೆ ಡಿ.ಕೆ. ಶಿವಕುಮಾರ್ ಇಡಿ ವಶಕ್ಕೆ: ದೆಹಲಿ ನ್ಯಾಯಾಲಯ ಆದೇಶ
ನೋಟ್ ರದ್ದತಿ ವೇಳೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಸೆಪ್ಟೆಂಬರ್ 13ರವರೆಗೂ ಜಾರಿ ನಿರ್ದೇಶನಾಲಯ ವಶಕ್ಕೆ ನೀಡಲು ನ್ಯಾಯಾಲಯ ಇಂದು ಆದೇಶ ಪ್ರಕಟಿಸಿದೆ

ನವದೆಹಲಿ: ನೋಟ್ ರದ್ದತಿ ವೇಳೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಸೆಪ್ಟೆಂಬರ್ 13ರವರೆಗೂ ಜಾರಿ ನಿರ್ದೇಶನಾಲಯ ವಶಕ್ಕೆ ನೀಡಲು ನ್ಯಾಯಾಲಯ ಇಂದು ಆದೇಶ ಪ್ರಕಟಿಸಿದೆ
ನಿನ್ನೆ ಬಂಧನಕ್ಕೊಳಗಾದ ಡಿಕೆ ಶಿವಕುಮಾರ್ ಅವರನ್ನು ಇಂದು ಮಧ್ಯಾಹ್ನ ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರುಪಡಿಸಲಾಯಿತು. ವಾದ ವಿವಾದ ಆಲಿಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಜಯ್ ಕುಮಾರ್ ಕುಹರ್ ಸೆಪ್ಟೆಂಬರ್ 13ರವರೆಗೂ ಡಿಕೆ ಶಿವಕುಮಾರ್ ಅವರನ್ನು ಇಡಿ ವಶಕ್ಕೆ ಒಪ್ಪಿಸಿ ಆದೇಶ ಪ್ರಕಟಿಸಿದರು.
ಪ್ರತಿದಿನ ಕುಟುಂಬ ಸದಸ್ಯರು ಹಾಗೂ ವಕೀಲರು ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಲು ನ್ಯಾಯಾಲಯ ಅವಕಾಶ ಮಾಡಿಕೊಟ್ಟಿದೆ. ಮತ್ತೊಂದೆದೆ ಡಿಕೆ ಶಿವಕುಮಾರ್ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 13ಕ್ಕೆ ನ್ಯಾಯಾಲಯ ಮುಂದೂಡಿದೆ.
ನ್ಯಾಯಾಲಯದ ತೀರ್ಪಿನಿಂದ ಕಾನೂನು ಸಮರದಲ್ಲಿ ಡಿಕೆ ಶಿವಕುಮಾರ್ ಅವರಿಗೆ ಹಿನ್ನೆಡೆಯಾಗಿದ್ದು, ಇನ್ನೂ ಹತ್ತು ದಿನಗಳ ಕಾಲ ಇಡಿ ವಶದಲ್ಲಿ ಇರಬೇಕಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


