ದೇಶ

ಹರಿಯಾಣ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷೆಯಾಗಿ ದಲಿತ ನಾಯಕಿ ಕುಮಾರಿ ಸೆಲ್ಜಾ ನೇಮಕ

ಹರಿಣಯಾಣ ಪ್ರದೇಶ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ಮಾಜಿ ಕೇಂದ್ರ ಸಚಿವೆ ಹಾಗೂ ದಲಿತ ನಾಯಕಿ ಕುಮಾರಿ ಸೆಲ್ಜಾ ಅವರನ್ನು ಬುಧವಾರ ನೇಮಕ ಮಾಡಲಾಗಿದೆ.

ಹರಿಯಾಣ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷೆಯಾಗಿ ದಲಿತ ನಾಯಕಿ ಕುಮಾರಿ ಸೆಲ್ಜಾ ನೇಮಕ
ಕುಮಾರಿ ಸೆಲ್ಜಾ
Published On :

ನವದೆಹಲಿ: ಹರಿಣಯಾಣ ಪ್ರದೇಶ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ಮಾಜಿ ಕೇಂದ್ರ ಸಚಿವೆ ಹಾಗೂ ದಲಿತ ನಾಯಕಿ ಕುಮಾರಿ ಸೆಲ್ಜಾ ಅವರನ್ನು ಬುಧವಾರ ನೇಮಕ ಮಾಡಲಾಗಿದೆ.

ಈ ಮೂಲಕ ಹರಿಯಾಣದಲ್ಲಿನ ಕಾಂಗ್ರೆಸ್‌ ಪಕ್ಷದೊಳಗಿನ ಆಂತರಿಕ ಬಿಕ್ಕಟ್ಟಿಗೆ ಅಂತ್ಯ ಹಾಡಲಾಗಿದ್ದು, ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಅಶೋಕ್ ತನ್ವರ್ ಅವರ ಸ್ಥಾನಕ್ಕೆ ಕುಮಾರಿ ಸೆಲ್ಜಾ ಅವರನ್ನು ನೂತನ ನೇತಾರರನ್ನಾಗಿ ಕಾಂಗ್ರೆಸ್ ಇಂದು ಘೋಷಿಸಿದೆ.

ಈ ವರ್ಷದ ಅಂತ್ಯದ ವೇಳೆಗೆ ವಿಧಾನಸಭಾ ಚುನಾವಣೆ ನಡೆಯಲಿರುವ ರಾಜ್ಯದಲ್ಲಿ ಭೂಪಿಂದರ್ ಸಿಂಗ್ ಹೂಡಾ ಅವರನ್ನು ಪಕ್ಷದ ಶಾಸಕಾಂಗ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಚುನಾವಣಾ ನಿರ್ವಹಣಾ ಸಮಿತಿಯ ಅಧ್ಯಕ್ಷ ಎಂದು ಪಕ್ಷ ಘೋಷಿಸಿದೆ.

ಸಂಘಟನೆ ಉಸ್ತುವಾರಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ಹರಿಯಾಣದ ಪ್ರಧಾನ ಕಾರ್ಯದರ್ಶಿ ಗುಲಾಮ್ ನಬಿ ಆಜಾದ್ ಅವರು ಎಐಸಿಸಿ ಕೇಂದ್ರ ಕಚೇರಿಯಲ್ಲಿ ಹೊಸ ಅಧ್ಯಕ್ಷರ ನೇಮಕಾತಿ ಪ್ರಕಟಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.