ಉತ್ತರಪ್ರದೇಶ: ಹಿಂದುಗಳಿಗೆ ಬಲವಂತದ 'ಬಾಡೂಟ', 43 ಮುಸ್ಲಿಂರ ವಿರುದ್ಧ ಪ್ರಕರಣ
ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ನಡೆದ ಉರ್ಸ್ ಉತ್ಸವದಲ್ಲಿ ಹಿಂದೂಗಳಿಗೆ ಬಲವಂತವಾಗಿ ಬಿರಿಯಾನಿ ತಿನ್ನಿಸಿದ ಆರೋಪದ ಮೇಲೆ 43 ಮಂದಿ ಮುಸ್ಲಿಂರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಉತ್ತರಪ್ರದೇಶ: ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ನಡೆದ ಉರ್ಸ್ ಉತ್ಸವದಲ್ಲಿ ಹಿಂದೂಗಳಿಗೆ ಬಲವಂತವಾಗಿ ಬಿರಿಯಾನಿ ತಿನ್ನಿಸಿದ ಆರೋಪದ ಮೇಲೆ 43 ಮಂದಿ ಮುಸ್ಲಿಂರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಆಗಸ್ಟ್ 31ರಂದು ಚಾರ್ಖಾರಿ ಪ್ರದೇಶದ ಸಲಾತ್ ಗ್ರಾಮದಲ್ಲಿ ಶೇಖ್ ಪೀರ್ ಬಾಬ್ ಅವರ ಉರ್ಸ್ ಸಂದರ್ಭದಲ್ಲಿ ಈ ಉರ್ಸ್ ಅನ್ನು ಆಯೋಜಿಸಲಾಗಿತ್ತು. ಈ ವೇಳೆ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸಿ ಬಿರಿಯಾನಿಯನ್ನು ಉದ್ದೇಶಪೂರ್ವಕವಾಗಿ ನೀಡಲಾಗುತ್ತಿತ್ತು ಎಂದು ಆರೋಪಿಸಲಾಗಿತ್ತು.
ಬಿಜೆಪಿ ಶಾಸಕ ಬ್ರಿಜ್ಛೂಷಣ್ ರಾಜಪೂತ್ ಅವರು ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದ್ದು ಈ ಹಿನ್ನೆಲೆಯಲ್ಲಿ ಪೊಲೀಸರು 43 ಮುಸ್ಲಿಂರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
43 ಮುಸ್ಲಿಂರ ವಿರುದ್ಧ 153ಎ(ಧರ್ಮದ ನೆಲೆಯಲ್ಲಿ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295ಎ(ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು), 420(ವಂಚನೆ) ಮತ್ತು 506(ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


