ಏರ್ಷೆಲ್- ಮ್ಯಾಕ್ಸಿಸ್ ಪ್ರಕರಣ: ಚಿದಂಬರಂ ಮತ್ತು ಪುತ್ರ ಕಾರ್ತಿಗೆ ಜಾಮೀನು
ಏರ್ಸೆಲ್ -ಮ್ಯಾಕ್ಸಿಸ್ ಪ್ರಕರಣದಲ್ಲಿ ದೆಹಲಿ ಕೋರ್ಟ್, ಗುರುವಾರ ಕೇಂದ್ರದ ಮಾಜಿ ಸಚಿವ, ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ನವದೆಹಲಿ: ಏರ್ಸೆಲ್ -ಮ್ಯಾಕ್ಸಿಸ್ ಪ್ರಕರಣದಲ್ಲಿ ದೆಹಲಿ ಕೋರ್ಟ್, ಗುರುವಾರ ಕೇಂದ್ರದ ಮಾಜಿ ಸಚಿವ, ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಪಿ.ಚಿದಂಬರಂ ಮತ್ತು ಕಾರ್ತಿ ವಿರುದ್ಧ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಪ್ರಕರಣ ದಾಖಲಿಸಿತ್ತು. ವಿಶೇಷ ಜಡ್ಜ್ ಒಪಿ ಸೈನಿ ಚಿದಂಬರಂ ಮತ್ತು ಅವರ ಪುತ್ರನಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.
ತಲಾ ಒಂದು ಲಕ್ಷ ರು. ವಯಕ್ತಿಕ ಬಾಂಡ್, ನೀಡುವುದರ ಜೊತೆಗೆ ತನಿಖೆಗೆ ಸಹಕರಿಸುವಂತೆ ಷರತ್ತು ವಿಧಿಸಲಾಗಿದೆ.
2006ರಲ್ಲಿ ಹಣಕಾಸು ಸಚಿವರಾಗಿದ್ದ ಚಿದಂಬರಂ ವಿದೇಶಿ ಹೂಡಿಕೆ ಪ್ರೋತ್ಸಾಹ ಮಂಡಳಿ (ಎಫ್ಐಪಿಬಿ) ಅನುಮೋದನೆ ಮೂಲಕ ಹೇಗೆ ಆರ್ಥಿಕ ಅವ್ಯವಹಾರ ನಡೆಸಲು ಬಳಸಿಕೊಂಡಿದ್ದಾರೆ ಎನ್ನುವ ಕುರಿತಂತೆ ಸಿಬಿಐ ತನಿಖೆ ನಡೆಸುತ್ತಿದೆ.
ಹಿರಿಯ ಕಾಂಗ್ರೆಸ್ ಮುಖಂಡ ಚಿದಂಬರಂ ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ 3,500 ಕೋಟಿ ರೂ.ಮತ್ತು ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ 305 ಕೋಟಿ ರೂ. ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


