ಜೈಲಿನಲ್ಲಿ ವಿದೇಶಿ ಶೌಚಾಲಯ, ಔಷಧ ಮತ್ತಿತರ ಸೌಕರ್ಯ ಬಯಸಿದ ಚಿದಂಬರಂ
ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರುವ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರಿಗೆ ಔಷಧಗಳು, ವಿದೇಶಿ ಶೌಚಾಲಯ ಮತ್ತಿತರ ಸವಲತ್ತುಗಳನ್ನು ಒದಗಿಸಲು ನ್ಯಾಯಾಲಯದ ಬಳಿ ಮನವಿ ಮಾಡಿಕೊಳ್ಳಲಾಗಿದೆ.

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರುವ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರಿಗೆ ಔಷಧಗಳು, ವಿದೇಶಿ ಶೌಚಾಲಯ ಮತ್ತಿತರ ಸವಲತ್ತುಗಳನ್ನು ಒದಗಿಸಲು ನ್ಯಾಯಾಲಯದ ಬಳಿ ಮನವಿ ಮಾಡಿಕೊಳ್ಳಲಾಗಿದೆ.
ಸೆಪ್ಟೆಂಬರ್ 19ರವರೆಗೂ ನ್ಯಾಯಾಂಗ ಬಂಧನದ ಆದೇಶವನ್ನು ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಪ್ರಕಟಿಸಿದ ಬಳಿಕ ಚಿದಂಬರಂ ಅವರಿಗೆ ಕನ್ನಡಕ, ಸೂಕ್ತ ಔಷಧಗಳನ್ನು ತೆಗೆದುಕೊಂಡು ಹೋಗಲು ಹಾಗೂ ವಿದೇಶಿ ಶೌಚಾಲಯ ಒದಗಿಸಲು ಅನುಮತಿ ಬಯಸಿ ಚಿದಂಬರಂ ಪರ ವಕೀಲರು ಪ್ರತ್ಯೇಕ ಅರ್ಜಿ ಸಲ್ಲಿಸಿದರು.
ಸೂಕ್ತ ಭದ್ರತೆ ಇರುವ ಪ್ರತ್ಯೇಕ ಸೆಲ್ ವ್ಯವಸ್ಥೆ ಮಾಡಿಕೊಡುವಂತೆಯೂ ಕೇಳಿಕೊಳ್ಳಲಾಗಿದೆ. ಅರ್ಜಿಗಳಲ್ಲಿ ಮಾಡಿದ ಮನವಿಗಳಿಗೆ ಅನುಮತಿಸಲಾಗಿದೆ "ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿದೆ.
ತಿಹಾರಿ ಜೈಲಿನಲ್ಲಿ ಚಿದಂಬರಂ ಅವರಿಗೆ ಸೂಕ್ತ ಭದ್ರತಾ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಸಾಲಿಸಿಟರಿ ಜನರಲ್ ತುಷಾರ್ ಮೆಹ್ತಾ ವಿಚಾರಣೆ ಸಂದರ್ಭದಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


