ದೇಶ

ತಿಹಾರ್ ಜೈಲಿಗೆ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ!

ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರಿಗೆ ದೆಹಲಿ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ತಿಹಾರ್ ಜೈಲಿಗೆ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ!
ಪಿ.ಚಿದಂಬರಂ
Published On :

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರಿಗೆ ದೆಹಲಿ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ದೆಹಲಿಯ ವಿಶೇಷ ನ್ಯಾಯಾಧೀಶರಾದ ಅಜಯ್ ಕುಮಾರ್ ಕುಹಾರ್ ಅವರು ಚಿದಂಬರಂ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಚಿದಂಬರಂ ಅವರನ್ನು ಸೆಪ್ಟೆಂಬರ್ 19ರವರೆಗೆ ತಿಹಾರ್ ಜೈಲಿನಲ್ಲಿ ಇಡಲಾಗುತ್ತಿದೆ.

ಪ್ರಕರಣ ಸಂಬಂಧ ಎರಡು ದಿನಗಳ ಸಿಬಿಐ ಕಸ್ಟಡಿ ಇಂದಿಗೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ದೆಹಲಿ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದು ತಿಹಾರ್ ಜೈಲಿನಲ್ಲಿ ವಿಶೇಷ ಕೊಠಡಿಯಲ್ಲಿಡಲು ಸೂಚಿಸಿದೆ.

ಐಎನ್ಎಕ್ಸ್ ಪ್ರಕರಣ ಸಂಬಂಧ ಚಿದಂಬರಂ ಅವರನ್ನು ಆಗಸ್ಟ್ 21ರ ಮಧ್ಯರಾತ್ರಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.