ಇಸ್ರೋ ಅಸಾಧಾರಣ ಕಾರ್ಯತತ್ವ, ಧೈರ್ಯ ಕೊಂಡಾಡಿದ ರಾಷ್ಟ್ರಪತಿ ಕೋವಿಂದ್
ಚಂದ್ರಯಾನ-2 ಮೂಲಕ ಭಾರತದ ಜಾಣ್ಮೆ ಮತ್ತು ದೃಢತೆಯನ್ನು ಇಡೀ ವಿಶ್ವದ ಮುಂದಿಟ್ಟಿರುವ ಇಸ್ರೋವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ಕೊಂಡಾಡಿದ್ದಾರೆ.

ನವದೆಹಲಿ: ಚಂದ್ರಯಾನ-2 ಮೂಲಕ ಭಾರತದ ಜಾಣ್ಮೆ ಮತ್ತು ದೃಢತೆಯನ್ನು ಇಡೀ ವಿಶ್ವದ ಮುಂದಿಟ್ಟಿರುವ ಇಸ್ರೋವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ಕೊಂಡಾಡಿದ್ದಾರೆ.
ಇಸ್ರೋ ಅವಿರತ ಪರಿಶ್ರಮ ಕುರಿತಂತೆ ಪ್ರತಿಕ್ರಿಯೆ ನೀಡಿರುವ ರಾಷ್ಟ್ರಪತಿಗಳು, ಚಂದ್ರಯಾನ-2 ಮೂಲಕ ಇಸ್ರೋದ ಇಡೀ ತಂಡ ತಮ್ಮ ಅಸಾಧಾರಣ ಕಾರ್ಯತತ್ಪರತೆ ಮತ್ತು ಧೈರ್ಯವನ್ನು ತೋರಿಸಿದೆ. ಈ ದೇಶ ಇಸ್ರೋ ಸಾಧನೆಗೆ ಹೆಮ್ಮೆ ಪಡುತ್ತದೆ. ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ಭರವಸೆ ಇದೆ ಎಂದು ಹೇಳಿದ್ದಾರೆ.
ಚಂದ್ರನ ಅಂಗಳದ ಮೇಲೆ ಲ್ಯಾಂಡರ್'ನ್ನು ಇಳಿಸುವ ಕೊನೆಯ 15 ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ ಕಡಿದುಕೊಂಡಿತು. ಈ ವೇಳೆ ಇಸ್ರೋ ಕೇಂದ್ರದಲ್ಲಿ ಆತಂಕದ ವಾತಾವರಣ ಉಂಟಾಗಿತ್ತು.
ಸಿಗ್ನಲ್ ಗಾಗಿ ಕೆಲ ಹೊತ್ತು ನಿರೀಕ್ಷಿಸಲಾಯಿತು. ಆದರೆ, ಯಾವುದೇ ಧನಾತ್ಮಕ ಫಲ ಸಿಗಲಿಲ್ಲ. ಕೊನೆಗೆ ಇಸ್ರೋ ಅಧ್ಯಕ್ಷ ಶಿವನ್ ಅವರು ಲ್ಯಾಂಡರ್ 2.1 ಕಿಮೀವರೆಗೆ ಸುಸೂತ್ರವಾಗಿ ಕೆಲಸ ಮಾಡಿದೆ. ಆ ನಂತರ ಸಿಗ್ನಲ್ ಕಡಿತಗೊಂಡಿದೆ. ಇದರ ಡೇಟಾವನ್ನು ವಿಶ್ಲೇಷಣೆ ಮಾಡುತ್ತೇವೆಂದು ಘೋಷಣೆ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


