ದೆಹಲಿ ಮೆಟ್ರೋ ರೈಲಿಗೆ ಸಿಲುಕಿ 26ರ ಮಹಿಳೆ ಆತ್ಮಹತ್ಯೆ: ಪತ್ರ ವಶಕ್ಕೆ
ದೆಹಲಿ ಮೆಟ್ರೋಗೆ ಸಿಲುಕಿ 26 ರ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನವದೆಹಲಿ: ದೆಹಲಿ ಮೆಟ್ರೋಗೆ ಸಿಲುಕಿ 26 ರ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾಡಲ್ ಟೌನ್ ಸ್ಟೇಷನ್ ನಲ್ಲಿ ಮೆಟ್ರೋ ರೈಲಿಗೆ ಎದುರಾಗಿ ಜಿಗಿದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸರು ಆತ್ಮಹತ್ಯೆಗೆ ಸಂಬಂಧಿಸಿದ ಮಹಿಳೆ ಬರೆದಿದ್ದ ಪತ್ರವನ್ನು ವಶಪಡಿಸಿಕೊಂಡಿದ್ದಾರೆ.
ಸೆ.08 ರಂದು ಸಂಜೆ ಈ ಘಟನೆ ನಡೆದಿದ್ದು, ಮೃತ ಮಹಿಳೆಯನ್ನು ದೆಹಲಿಯ ಪಹರ್ ಗಂಜ್ ನಿವಾಸಿ ಮೀನಾಕ್ಷಿ ಗರ್ಗ್ ಎಂದು ಗುರುತಿಸಲಾಗಿದೆ.
ವೃತ್ತಿಯಲ್ಲಿ ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮೀನಾಕ್ಷಿ ಗರ್ಗ್ ಆತ್ಮಹತ್ಯೆಗೂ ಮುನ್ನ ಪತ್ರ ಬರೆದಿದ್ದು, ತಮ್ಮ ಸಾವಿಗೆ ಯಾರೂ ಕಾರಣರಲ್ಲ ಎಂದು ಹೇಳಿಕೊಂಡಿದ್ದಾರೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಮೃತರ ಕುಟುಂಬ ಸದಸ್ಯರು ಪೊಲೀಸರಿಗೆ ಹೇಳಿಕೆ ನೀಡಿದ್ದು, ಮೀನಾಕ್ಷಿ ಚಿಕಿತ್ಸೆ ಪಡೆಯುತ್ತಿದ್ದರು ಎಂಬ ಮಾಹಿತಿ ನೀಡಿದ್ದಾರೆ.
ಮೀನಾಕ್ಷಿ ಒಂದು ವಾರದಲ್ಲಿ ದೆಹಲಿ ಮೆಟ್ರೋ ನಿಲ್ದಾಣದಲ್ಲೇ ಇದು ಮೂರನೇ ಬಾರಿಗೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


