ಅಭಿವೃದ್ಧಿ ಇಲ್ಲದ 100 ದಿನ: ಪ್ರಧಾನಿ ಮೋದಿ ಸರ್ಕಾರಕ್ಕೆ ರಾಹುಲ್ ಧನ್ಯವಾದ!
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರ 100 ದಿನಗಳು ಪೂರೈಸಿದ್ದು ಈ ಅವಧಿಯಲ್ಲಿ ಸರ್ಕಾರದ ಮಟ್ಟದಲ್ಲಿ ನಡೆದ ಬೆಳವಣಿಗೆಗಳ ಕುರಿತು ಕೇಂದ್ರ ಸರ್ಕಾರ ಪ್ರಕಟಣೆ ನೀಡಿತ್ತು ಇದಕ್ಕೆ ಕಾಂಗ್ರೆಸ್ ಲೇವಡಿ ಮಾಡಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರ 100 ದಿನಗಳು ಪೂರೈಸಿದ್ದು ಈ ಅವಧಿಯಲ್ಲಿ ಸರ್ಕಾರದ ಮಟ್ಟದಲ್ಲಿ ನಡೆದ ಬೆಳವಣಿಗೆಗಳ ಕುರಿತು ಕೇಂದ್ರ ಸರ್ಕಾರ ಪ್ರಕಟಣೆ ನೀಡಿತ್ತು ಇದಕ್ಕೆ ಕಾಂಗ್ರೆಸ್ ಲೇವಡಿ ಮಾಡಿದೆ.
ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ನೂರು ದಿನಗಳ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ. ನಾಯಕತ್ವದ ಕೊರತೆ ಮತ್ತು ಸರ್ಕಾರವನ್ನು ಟೀಕಿಸುವ ಮಾಧ್ಯಮಗಳ ಕತ್ತು ಹಿಸುಕುವ ಪ್ರಯತ್ನಗಳು ನಡೆಸುತ್ತಿವೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.
ಟ್ವೀಟ್ ನಲ್ಲಿ 100 ದಿನ ಅಭಿವೃದ್ಧಿ ಇಲ್ಲ ಎಂದು ಟ್ವೀಟ್ ಮಾಡಿ ಧನ್ಯವಾದ ಹೇಳಿರುವ ರಾಹುಲ್ ಗಾಂಧಿ, ಪ್ರಜಾಪ್ರಭುತ್ವ ವಿರೋಧಿ ಧೋರಣೆ. ಮಾಧ್ಯಮಗಳ ಧ್ವನಿ ದಮನ. ಯೋಜನೆಗಳ ಕೊರತೆ, ಸೂಕ್ತ ನಾಯಕತ್ವದ ಕೊರತೆಯಿಂದ ಆರ್ಥಿಕ ಮುಗ್ಗಟ್ಟಿಗೆ ಕಾರಣವಾಗಿದೆ ಎಂದು ಕೇಂದ್ರದ ವಿರುದ್ಧ ರಾಹುಲ್ ಕಿಡಿಕಾರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


