ತೆಲಂಗಾಣ ಸಚಿವ ಸಂಪುಟ ವಿಸ್ತರಣೆ: ಕೆಸಿಆರ್ ಪುತ್ರ, ಸಂಬಂಧಿ ಸೇರಿ 6 ನೂತನ ಸಚಿವರಿಂದ ಪ್ರಮಾಣವಚನ ಸ್ವೀಕಾರ
ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ನೇತೃತ್ವದ ತೆಲಂಗಾಣ ರಾಜ್ಯ ಸಚಿವ ಸಂಪುಟವನ್ನು ವಿಸ್ತರಿಸಲಾಗಿದ್ದು, ಭಾನುವಾರ 6 ಮಂದಿ ಹೊಸ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.

ಹೈದರಾಬಾದ್: ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ನೇತೃತ್ವದ ತೆಲಂಗಾಣ ರಾಜ್ಯ ಸಚಿವ ಸಂಪುಟವನ್ನು ವಿಸ್ತರಿಸಲಾಗಿದ್ದು, ಭಾನುವಾರ 6 ಮಂದಿ ಹೊಸ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.
ಕೆಸಿಆರ್ ಅವರು ಎರಡನೇ ಅವಧಿಗೆ ಅಧಿಕಾರಕ್ಕೆ ಬಂದ ನಂತರ ಇಂದು ಎರಡನೇ ಬಾರಿ ತಮ್ಮ ಸಂಪುಟ ವಿಸ್ತರಣೆ ಮಾಡಿದ್ದು, ತಮ್ಮ ಪುತ್ರ ಕೆಟಿ ರಾಮ ರಾವ್ ಹಾಗೂ ಸಂಬಂಧಿ ಟಿ ಹರೀಶ್ ರಾವ್, ಸಬಿತಾ ಇಂದ್ರಾ ರೆಡ್ಡಿ, ಪುವ್ವದ್ ಅಜಯ್ ಕುಮಾರ್, ಗಂಗೂಲ ಕಮಲಾಕರ್ ಮತ್ತು ಸತ್ಯವತಿ ರಾಠೋಡ್ ಅವರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಇದರೊಂದಿಗೆ 12 ಸದಸ್ಯ ಬಲವಿದ್ದ ಕೆಸಿಆರ್ ಸಚಿವ ಸಂಪುಟ ಈಗ 18ಕ್ಕೇರಿದಂತಾಗಿದೆ.
ಇಂದು ಬೆಳಗ್ಗೆ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡ ತೆಲಂಗಾಣ ನೂತನ ರಾಜ್ಯಪಾಲೆ ತಮಿಳಿಸೈ ಸೌಂದರರಾಜ್ ಅವರು ಸಂಜೆ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


