ಜೀವ ರಕ್ಷಣೆಗಾಗಿ ದುಬಾರಿ ದಂಡ, ರಾಜ್ಯಗಳು ದಂಡದ ಮೊತ್ತ ಕಡಿಮೆ ಮಾಡಬಹುದು: ಗಡ್ಕರಿ
ಅಪಘಾತ ತಡೆಯಲು ಮತ್ತು ಜನರ ಜೀವವನ್ನು ರಕ್ಷಿಸುವುದಕ್ಕಾಗಿ ಸಂಚಾರಿ ನಿಯಮ ಉಲ್ಲಂಘನೆಗೆ ದುಬಾರಿ ದಂಡ ವಿಧಿಸಲಾಗುತ್ತಿದೆ. ಇದರ ಉದ್ದೇಶ ಹಣ ಸಂಗ್ರಹಿಸುವುದಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ...

ನವದೆಹಲಿ: ಅಪಘಾತ ತಡೆಯಲು ಮತ್ತು ಜನರ ಜೀವವನ್ನು ರಕ್ಷಿಸುವುದಕ್ಕಾಗಿ ಸಂಚಾರಿ ನಿಯಮ ಉಲ್ಲಂಘನೆಗೆ ದುಬಾರಿ ದಂಡ ವಿಧಿಸಲಾಗುತ್ತಿದೆ. ಇದರ ಉದ್ದೇಶ ಹಣ ಸಂಗ್ರಹಿಸುವುದಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ.
ದೇಶದಲ್ಲಿ ಅತಿ ಹೆಚ್ಚು ಜನ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದಾರೆ. ದೇಶಾದ್ಯಂತ 1.20 ಲಕ್ಷ ಜನರು ಅಪಘಾತಗಳಲ್ಲಿ ಜೀವಬಿಡುತ್ತಿದ್ದಾರೆ. ಜನರ ಜೀವ ರಕ್ಷಣೆ ಹಾಗೂ ರಸ್ತೆ ಅಪಘಾತ ನಿಯಂತ್ರಣವೇ ನಮ್ಮ ಮುಖ್ಯ ಉದ್ದೇಶ. ಕಾನೂನು ಉಲ್ಲಂಘಿಸದ ಜನರು ಭಯಪಡಬಾರದು. ತಪ್ಪು ಮಾಡದಿದ್ದರೆ ಅವರು ಯಾವುದೇ ದಂಡ ತೆರಬೇಕಿಲ್ಲ ಎಂದು ಗಡ್ಕರಿ ತಿಳಿಸಿದ್ದಾರೆ.
ಇನ್ನು ಸೆಪ್ಟೆಂಬರ್ 1ರಿಂದ ಜಾರಿಗೆ ಬಂದಿರುವ ಹೊಸ ಮೋಟಾರು ವಾಹನ ಕಾಯ್ದೆ(ತಿದ್ದುಪಡಿ) ಅಳವಡಿಕೆ ಆಯಾ ರಾಜ್ಯಗಳಿಗೆ ಬಿಟ್ಟಿದ್ದು, ರಾಜ್ಯ ಸರ್ಕಾರಗಳು ದಂಡದ ಮೊತ್ತವನ್ನು ಪರಿಷ್ಕರಿಸಬಹುದು ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.
ಹೊಸ ಕಾಯ್ದೆಯ ಪ್ರಕಾರ ಸಂಚಾರ ನಿಯಮ ಉಲ್ಲಂಘನೆ ಮಾಡಿದವರಿಗೆ ದುಬಾರಿ ದಂಡವನ್ನು ಪೊಲೀಸರು ವಿಧಿಸುತ್ತಿದ್ದಾರೆ. ಇದಕ್ಕೆ ಎಲ್ಲ ರಾಜ್ಯಗಳಲ್ಲೂ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗುತ್ತಿದೆ. ಈಗಾಗಲೇ ಗುಜರಾತ್ ರಾಜ್ಯ ಸರ್ಕಾರ, ದಂಡದ ಪ್ರಮಾಣವನ್ನು ಕಡಿಮೆ ಮಾಡುವುದಾಗಿ ಘೋಷಿಸಿದೆ. ಕರ್ನಾಟಕ ಸರ್ಕಾರ ಕೂಡ ದಂಡದ ಪ್ರಮಾಣ ಇಳಿಕೆ ಮಾಡುವುದಾಗಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


