ಅರುಣ್ ಜೇಟ್ಲಿ ಮೈದಾನವಾಗಿ ಬದಲಾಗಲಿದೆ ಫಿರೋಜ್ ಶಾ ಕೋಟ್ಲಾ ಕ್ರೀಡಾಂಗಣ
ಭಾರತದ ಪ್ರಮುಖ ಕ್ರಿಕೆಟ್ ಮೈದಾನಗಳಲ್ಲಿ ಒಂದಾಗಿರುವ ದೆಹಲಿಯ ಫಿರೋಜ್ ಶಾ ಕೋಟ್ಲಾ ಕ್ರೀಡಾಂಗಣಕ್ಕೆ ಇಂದು ಮರು ನಾಮಕರಣವಾಗಲಿದೆ.

ನವದೆಹಲಿ: ಭಾರತದ ಪ್ರಮುಖ ಕ್ರಿಕೆಟ್ ಮೈದಾನಗಳಲ್ಲಿ ಒಂದಾಗಿರುವ ದೆಹಲಿಯ ಫಿರೋಜ್ ಶಾ ಕೋಟ್ಲಾ ಕ್ರೀಡಾಂಗಣಕ್ಕೆ ಇಂದು ಮರು ನಾಮಕರಣವಾಗಲಿದೆ.
ಇತ್ತೀಚೆಗೆ ಅಗಲಿದ ಮಾಜಿ ಸಚಿವ ಅರುಣ್ ಜೇಟ್ಲಿ ಅವರ ಹೆಸರನ್ನು ದೆಹಲಿ ಕ್ರಿಕೆಟ್ ಕ್ರೀಡಾಂಗಣಕ್ಕೆ ಇಡಲು ದೆಹಲಿ ಕ್ರಿಕೆಟ್ ಮಂಡಳಿ ನಿರ್ಧರಿಸಿದೆ.
ಇಂದು ನಡೆಯುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕ್ರೀಡಾಂಗಣಕ್ಕೆ ಮರುನಾಮಕರಣ ಮಾಡಲಿದ್ದಾರೆ.
ಕ್ರೀಡಾ ಸಚಿವ ಕಿರಣ್ ರಿಜುಜು, ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ತಂಡದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅರುಣ್ ಜೇಟ್ಲಿ ಅವರ ಕುಟುಂಬಿಕರು ಕೂಡಾ ಇಂದಿನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


