ನಮಗೆ 'ಮೂರ್ಖ' ಸಿದ್ಧಾಂತಗಳ ಅಗತ್ಯವಿಲ್ಲ: ನಿರ್ಮಲಾ ಸೀತಾರಾಮನ್ ಗೆ ರಾಹುಲ್ ತಿರುಗೇಟು
ದೇಶದಲ್ಲಿ ಆರ್ಥಿಕತೆ ಕುಸಿತ ಕಂಡುಬಂದಿರುವ ಈ ಸಂದರ್ಭದಲ್ಲಿ ಪ್ರಚಾರ, ಇನ್ನೊಬ್ಬರನ್ನು ಪ್ರಚೋದಿಸುವಂತಹ ಸುದ್ದಿಗಳು, ಮೂರ್ಖ ಸಿದ್ಧಾಂತಗಳು ನಮಗೆ ಬೇಕಾಗಿಲ್ಲ, ಆರ್ಥಿಕತೆಯನ್ನು ಸರಿಪಡಿಸುವ ವಾಸ್ತವ ಯೋಜನೆಯ ಅಗತ್ಯವಿದೆ ಎಂದು ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ: ದೇಶದಲ್ಲಿ ಆರ್ಥಿಕತೆ ಕುಸಿತ ಕಂಡುಬಂದಿರುವ ಈ ಸಂದರ್ಭದಲ್ಲಿ ಪ್ರಚಾರ, ಇನ್ನೊಬ್ಬರನ್ನು ಪ್ರಚೋದಿಸುವಂತಹ ಸುದ್ದಿಗಳು, ಮೂರ್ಖ ಸಿದ್ಧಾಂತಗಳು ನಮಗೆ ಬೇಕಾಗಿಲ್ಲ, ಆರ್ಥಿಕತೆಯನ್ನು ಸರಿಪಡಿಸುವ ವಾಸ್ತವ ಯೋಜನೆಯ ಅಗತ್ಯವಿದೆ ಎಂದು ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಆಟೊಮೊಬೈಲ್ ವಲಯದಲ್ಲಿ ಕುಸಿತ ಕಂಡುಬಂದಿರುವುದಕ್ಕೆ ಕಾರಣವೇನು ಎಂದು ವಿಶ್ಲೇಷಿಸುತ್ತಾ ಮೊನ್ನೆ ಚೆನ್ನೈಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ಭಾರತಕ್ಕೆ ಇಲ್ಲಸಲ್ಲದ ಪ್ರಚಾರಗಳು, ಈಗಿನ ಕಾಲದ ಜನರ ಬಗ್ಗೆ ಪ್ರಚೋದನಾಕಾರಿ ಸುದ್ದಿಗಳು, ಮೂರ್ಖ ಸಿದ್ದಾಂತಗಳು ಬೇಕಿಲ್ಲ, ತಳಮಟ್ಟದ ವಾಸ್ತವ ಯೋಜನೆಗಳನ್ನು ರೂಪಿಸಿ ಆರ್ಥಿಕತೆಯನ್ನು ಸರಿಪಡಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.
ಕೊನೆಗೂ ಸರ್ಕಾರ ದೇಶದಲ್ಲಿ ಸಮಸ್ಯೆ ಇದೆ ಎಂದು ಒಪ್ಪಿಕೊಂಡಿರುವುದು ಸಮಾಧಾನಕರ ಸಂಗತಿ. ನಮ್ಮ ದೇಶದಲ್ಲಿ ಸಮಸ್ಯೆ ಇದೆ ಎಂದು ಒಪ್ಪಿಕೊಳ್ಳುವುದು ಆರಂಭದ ಮುನ್ಸೂಚನೆಯಾಗಿದೆ ಎಂದು ಹೇಳಿದ್ದಾರೆ. ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರ ಸಂದರ್ಶನವನ್ನು ಟ್ಯಾಗ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


