ಸೈನಿಕರೇ ಹೊತ್ತೊಯ್ಯಬಲ್ಲ ಟ್ಯಾಂಕರ್ ಧ್ವಂಸಗೊಳಿಸುವ ಕ್ಷಿಪಣಿ ಪರೀಕ್ಷೆ ಯಶಸ್ವಿ!
ಭಾರತೀಯ ಸೇನೆಯ ಬತ್ತಳಿಕೆಗೆ ಮತ್ತೊಂದು ಪ್ರಮುಖ ಅಸ್ತ್ರ ಸೇರ್ಪಡೆಯಾಗುತ್ತಿದ್ದು, ಶುತ್ರುಪಾಳಯದ ಟ್ಯಾಂಕರ್ ಗಳನ್ನು ಛಿದ್ರಗೊಳಿಸಬಲ್ಲ ವಿನಾಶಕಾರಿ ಕ್ಷಿಪಣಿ ಪರೀಕ್ಷೆ ನಡೆಸಲಾಗಿದೆ.

ಅಮರಾವತಿ: ಭಾರತೀಯ ಸೇನೆಯ ಬತ್ತಳಿಕೆಗೆ ಮತ್ತೊಂದು ಪ್ರಮುಖ ಅಸ್ತ್ರ ಸೇರ್ಪಡೆಯಾಗುತ್ತಿದ್ದು, ಶುತ್ರುಪಾಳಯದ ಟ್ಯಾಂಕರ್ ಗಳನ್ನು ಛಿದ್ರಗೊಳಿಸಬಲ್ಲ ವಿನಾಶಕಾರಿ ಕ್ಷಿಪಣಿ ಪರೀಕ್ಷೆ ನಡೆಸಲಾಗಿದೆ.
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಬುಧವಾರ ಆಂಧ್ರ ಪ್ರದೇಶದಲ್ಲಿ ಯುದ್ಧ ಟ್ಯಾಂಕರ್ ಹೊಡೆದುರುಳಿಸುವ ಸಾಮರ್ಥ್ಯದ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರೈಸಿದೆ.
ದೇಶೀಯವಾಗಿ ನಿರ್ಮಿಸಲಾದ ಈ ಕ್ಷಿಪಣಿ 'ಎಮ್‌ಪಿಎಟಿಜಿಎಮ್' ಅನ್ನು ಆಂಧ್ರಪ್ರದೇಶದ ಕರ್ನೂಲ್ ನಲ್ಲಿರುವ ರಕ್ಷಣಾ ಸಚಿವಾಲಯದ ನಿಗಾದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ.
ಯುದ್ಧಭೂಮಿಯಲ್ಲಿ ಯೋಧರು ಸುಲಭವಾಗಿ ಈ ಕ್ಷಿಪಣಿಯನ್ನು ಹೊತ್ತೊಯ್ಯಬಹುದಾಗಿದ್ದು, ಟ್ರೈಪಾಡ್ ಉಡಾವಣಾ ವ್ಯವಸ್ಥೆಯ ಸಹಾಯದಿಂದ ಉಡಾವಣೆ ಮಾಡಬಹುದಾಗಿದೆ. ಡಿಆರ್‌ಡಿಒ ನಡೆಸಿದ ಯಶಸ್ವಿ ಪರೀಕ್ಷೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಿನಂದಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


