ಬಾಬ್ರಿ ಮಸೀದಿ ದ್ವಂಸ ಪ್ರಕರಣ ವಿಚಾರಣೆ; ವಿಶೇಷ ನ್ಯಾಯಾಧೀಶರ ಅವಧಿ ವಿಸ್ತರಿಸಿದ ಯುಪಿ ಸರ್ಕಾರ
ಬಿಜೆಪಿ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಎಂ ಎಂ ಜೋಷಿ ಹಾಗೂ ಉಮಾ ಭಾರತಿ ಭಾಗಿಯಾಗಿರುವ 1992ರ ಬಾಬ್ರಿ ಮಸೀದಿ ದ್ವಂಸ ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಶೇಷ ನ್ಯಾಯಾಧೀಶರ ಅವಧಿಯನ್ನು ಸುಪ್ರೀಂಕೋರ್ಟ್

ಲಕ್ನೋ: ಬಿಜೆಪಿ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಎಂ ಎಂ ಜೋಷಿ ಹಾಗೂ ಉಮಾ ಭಾರತಿ ಭಾಗಿಯಾಗಿರುವ 1992ರ ಬಾಬ್ರಿ ಮಸೀದಿ ದ್ವಂಸ ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಶೇಷ ನ್ಯಾಯಾಧೀಶರ ಅವಧಿಯನ್ನು ಸುಪ್ರೀಂಕೋರ್ಟ್ ಸೂಚನೆಯಂತೆ ವಿಸ್ತರಿಸಿರುವುದಾಗಿ ಉತ್ತರ ಪ್ರದೇಶ ಸರ್ಕಾರ ಶುಕ್ರವಾರ ಸರ್ವೋಚ್ಛ ನ್ಯಾಯಾಲಯಕ್ಕೆ ತಿಳಿಸಿದೆ.
ನ್ಯಾಯಮೂರ್ತಿ ಆರ್.ಎಫ್. ನಾರಿಮನ್ ಹಾಗೂ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರನ್ನೊಳಗೊಂಡ ನ್ಯಾಯಪೀಠದ ಮುಂದೆ ಉತ್ತರ ಪ್ರದೇಶ ಸರ್ಕಾರದ ಮುಖ್ಯಕಾರ್ಯದರ್ಶಿ ಈ ಸಂಬಂಧ ಪ್ರಮಾಣಪತ್ರ ಹಾಗೂ ಸರ್ಕಾರಿ ಆದೇಶದ ಪ್ರತಿಯನ್ನು ಸಲ್ಲಿಸಿದ್ದಾರೆ.
ಉತ್ತರ ಪ್ರದೇಶದ ಪರವಾಗಿ ಹಾಜರಾದ ಹಿರಿಯ ವಕೀಲ ಐಶರ್ಯಾ ಭಟಿ, ದೇಶದ ಸರ್ವೋಚ್ಛ ನಾಯಾಲಯದ ನಿರ್ದೇಶನವನ್ನು ಪರಿಗಣಿಸಿ ಆಯೋಧ್ಯ ಧ್ವಂಸ ಪ್ರಕರಣದ ತೀರ್ಪು ನೀಡುವವರೆಗೆ ವಿಶೇಷ ನ್ಯಾಯಾಧೀಶರ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ತಿಳಿಸಿದರು. ಅಗತ್ಯವಾದ ಕ್ರಮ ಕೈಗೊಂಡಿರುವುದಕ್ಕೆ ನಮಗೆ ತೃಪ್ತಿಯಾಗಿದೆ ಎಂದು ಹೇಳಿದ ನ್ಯಾಯಪೀಠ ವಿಷಯವನ್ನು ಇತ್ಯರ್ಥಪಡಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


