ಬ್ಯಾನರ್ ಬಿದ್ದು ಯುವತಿ ಸಾವು: ಎಐಎಡಿಎಂಕೆ ನಾಯಕನ ವಿರುದ್ಧ ಕೇಸ್ ದಾಖಲು
ತಲೆ ಮೇಲೆ ಬ್ಯಾನರ್ ಬಿದ್ದು ಯುವತಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಡಿಎಂಕೆ ನಾಯಕ ಹಾಗೂ ಮಾಜಿ ಕೌನ್ಸಿಲರ್ ಎಸ್ ಜಯಗೋಪಾಲ್ ಅವರ ವಿರುದ್ಧ ಪಾಲಿಕರಣೈಯಲ್ಲಿ ಪೊಲೀಸರ್ ಎಫ್ಐಆರ್ ದಾಖಲಿಸಿದ್ದಾರೆ.

ಚೆನ್ನೈ: ತಲೆ ಮೇಲೆ ಬ್ಯಾನರ್ ಬಿದ್ದು ಯುವತಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಡಿಎಂಕೆ ನಾಯಕ ಹಾಗೂ ಮಾಜಿ ಕೌನ್ಸಿಲರ್ ಎಸ್ ಜಯಗೋಪಾಲ್ ಅವರ ವಿರುದ್ಧ ಪಾಲಿಕರಣೈಯಲ್ಲಿ ಪೊಲೀಸರ್ ಎಫ್ಐಆರ್ ದಾಖಲಿಸಿದ್ದಾರೆ.
ಜಯಗೋಪಾಲ್ ಅವರು ತಮ್ಮ ಪುತ್ರನ ಮದುವೆಗಾಗಿ ಅಳವಡಿಸಿದ್ದ ಬ್ಯಾನರ್ ಕುಸಿದುಬಿದ್ದು ನಿನ್ನೆ ಶುಭಶ್ರೀ ಎಂಬ ಯುವತಿ ಮೃಪಟ್ಟಿದ್ದರು.
ಶುಭಶ್ರೀ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಬ್ಯಾನರ್ ಕುಸಿ ಬಿದ್ದಿದೆ. ಪರಿಣಾಮ ಶುಭಶ್ರೀ ಗಾಯಗೊಂಡು ಕೆಳಗೆ ಬಿದ್ದಿದ್ದಾಳೆ. ಇದೇ ವೇಳೆ ಹಿಂಬದಿಯಿಂದ ಬರುತ್ತಿದ್ದ ಲಾರಿಯೊಂದು ಯುವತಿಯ ಮೇಲೆ ಹರಿದು ಹೋಗಿದೆ.
ಅನುಮತಿ ಪಡೆಯದೇ ಬ್ಯಾನರ್ ಹಾಕಿದ ಆರೋಪದ ಮೇಲೆ ಜಯಗೋಪಾಲ್ ಅವರ ವಿರುದ್ಧ ಪೊಲೀಸ್ ಕೇಸ್ ದಾಖಲಿಸಿದ್ದಾರೆ.
ಈ ಮಧ್ಯೆ, ಮದ್ರಾಸ್ ಹೈಕೋರ್ಟ್ ಘಟನೆಯ ಕುರಿತು ತನಿಖೆಗೆ ಆದೇಶಿಸಿದೆ ಮತ್ತು ಮೃತ ಯುವತಿಯ ಪೋಷಕರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ತಮಿಳುನಾಡು ಸರ್ಕಾರಕ್ಕೆ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


