ದೇಶ

ಮಹಾರಾಷ್ಟ್ರ: ಎನ್ ಕೌಂಟರ್ ನಲ್ಲಿ ಇಬ್ಬರು ನಕ್ಸಲೀಯರು ಹತ 

ಮಹಾರಾಷ್ಟ್ರದ ಗಡ್ಚಿರೋಲಿಯ ಗ್ಯಾರಪಟ್ಟಿ ಗ್ರಾಮದಲ್ಲಿ ಭಾನುವಾರ ನಸುಕಿನ ಜಾವ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ.

ಮಹಾರಾಷ್ಟ್ರ: ಎನ್ ಕೌಂಟರ್ ನಲ್ಲಿ ಇಬ್ಬರು ನಕ್ಸಲೀಯರು ಹತ 
ಸಾಂದರ್ಭಿಕ ಚಿತ್ರ
Published On :

ಮುಂಬೈ: ಮಹಾರಾಷ್ಟ್ರದ ಗಡ್ಚಿರೋಲಿಯ ಗ್ಯಾರಪಟ್ಟಿ ಗ್ರಾಮದಲ್ಲಿ ಭಾನುವಾರ ನಸುಕಿನ ಜಾವ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ. ಕನಿಷ್ಠ ಆರು ಮಂದಿ ಗಾಯಗೊಂಡಿದ್ದಾರೆ. 


ಸ್ಥಳದಲ್ಲಿ ಶೋಧ ಕಾರ್ಯ ಮುಂದುವರಿದಿದೆ. ಈ ಹಿಂದಿನ ಘಟನೆಯಲ್ಲಿ ಮಹಾರಾಷ್ಟ್ರದ ಗಡ್ ಚಿರೋಲಿ ಪೊಲೀಸರು ಟಡ್ಗಾನ್ ಗ್ರಾಮದಲ್ಲಿ ನಡೆದ ಎನ್ ಕೌಂಟರ್ ನಲ್ಲಿ 14 ನಕ್ಸಲರು ಹತರಾಗಿದ್ದಾರೆ. ಗುಂಡಿನ ಚಕಮಕಿ ನಕ್ಸಲೀಯರು ಮತ್ತು ಸಿ-60 ಕಮಾಂಡೊಗಳ ಮಧ್ಯೆ ನಡೆಯಿತು.


ನಕ್ಸಲ್ ಭಾಸ್ಕರ್ ಅವಿತು ಕುಳಿತಿದ್ದಾನೆ ಎಂಬ ನಿಖರ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ಆರಂಭಿಸಿದರು. ಕಳೆದ ಮೇ 1ರಂದು ಪೊಲೀಸ್ ಸಿಬ್ಬಂದಿ ಮೇಲೆ ನಡೆದ ದಾಳಿಯ ಮಾಸ್ಟರ್ ಮೈಂಡರ್ ಭಾಸ್ಕರ್ ಆಗಿದ್ದನು. ಭಾಸ್ಕರ್ ಇಂದಿನ ಕಾರ್ಯಾಚರಣೆಯಲ್ಲಿ ಗಾಯಗೊಂಡಿದ್ದಾನೆ ಎಂದು ಶಂಕಿಸಲಾಗಿದೆ. 


ಸ್ಥಳದಿಂದ 14 ನಕ್ಸಲೀಯರ ಮೃತದೇಹಗಳನ್ನು ಹೊರತೆಗೆಯಲಾಗಿದೆ, ಸ್ವಯಂಚಾಲಿತ ರೈಫಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಗಡ್ ಚಿರೋಲಿ ವಲಯದ ಡೆಪ್ಯೂಟಿ ಇನ್ಸ್ ಪೆಕ್ಟರ್ ಆಫ್ ಪೊಲೀಸ್ ಅಂಕುಶ್ ಶಿಂಧೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.