ದೆಹಲಿಗೆ ಆಗಮಿಸದಂತೆ ಅಭಿಮಾನಿಗಳು,ಕಾರ್ಯಕರ್ತರಿಗೆ ಡಿಕೆ ಸುರೇಶ್ ಮನವಿ
ನೋಟು ರದ್ದತಿ ವೇಳೆ ಅಕ್ರಣ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ವಶದಲ್ಲಿರುವ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ನೋಡಲು ಅಭಿಮಾನಿಗಳು, ಕಾರ್ಯಕರ್ತರು ದೆಹಲಿಗೆ ಆಗಮಿಸಿದಂತೆ ಸಂಸದ ಹಾಗೂ ಡಿಕೆ ಶಿವಕುಮಾರ್ ಅವರ ಸಹೋದರ ಡಿ. ಕೆ. ಸುರೇಶ್ ಮನವಿ ಮಾಡಿದ್ದಾರೆ.

ನವದೆಹಲಿ:ನೋಟು ರದ್ದತಿ ವೇಳೆ ಅಕ್ರಣ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ವಶದಲ್ಲಿರುವ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ನೋಡಲು ಅಭಿಮಾನಿಗಳು, ಕಾರ್ಯಕರ್ತರು ದೆಹಲಿಗೆ ಆಗಮಿಸಿದಂತೆ ಸಂಸದ ಹಾಗೂ ಡಿಕೆ ಶಿವಕುಮಾರ್ ಅವರ ಸಹೋದರ ಡಿ. ಕೆ. ಸುರೇಶ್ ಮನವಿ ಮಾಡಿದ್ದಾರೆ.
ಜ್ವರ ಹಾಗೂ ರಕ್ತದೊತ್ತಡದಿಂದ ಬಳಲುತ್ತಿರುವ ಡಿಕೆ ಶಿವಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅವರನ್ನು ನೋಡಲು ಪದೇ ಪದೇ ದೆಹಲಿಗೆ ಆಗಮಿಸದಂತೆ ಡಿಕೆಶಿ ಅಭಿಮಾನಿಗಳಿಗೆ ಡಿ. ಕೆ. ಸುರೇಶ್ ವಿನಂತಿ ಮಾಡಿದ್ದಾರೆ.
ಅಭಿಮಾನಿಗಳು ಪದೇ ಪದೇ ದೆಹಲಿಗೆ ಶಿವಕುಮಾರ್ ಅವರನ್ನು ನೋಡಲು ಬರುತ್ತಿರುವುದರಿಂದ ಬೇರೆ ರೀತಿಯ ಸಮಸ್ಯೆಗಳು ಎದುರಾಗುತ್ತಿವೆ. ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ ನಡೆಯಲಿರುವ ವಿಚಾರಣೆ ಸಂದರ್ಭದಲ್ಲಿಯೂ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಆಗಮಿಸುವುದು ಬೇಡ ಎಂದಿದ್ದಾರೆ.
ವಿಚಾರಣೆ ಸಂದರ್ಭದಲ್ಲಿ ಹೆಚ್ಚು ಜನರು ನ್ಯಾಯಾಲಯದ ಆವರಣದಲ್ಲಿ ಜಮಾಯಿಸುವುದರಿಂದ ನ್ಯಾಯಾಂಗ ಪ್ರಕ್ರಿಯೆ ಹಾಗೂ ಆಡಳಿತಾತ್ಮಕ ವ್ಯವಸ್ಥೆಗೆ ಸಮಸ್ಯೆ ಎದುರಾಗುತ್ತದೆ. ಈ ಕಾರಣದಿಂದಾಗಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ತಮ್ಮ ಊರುಗಳಲ್ಲೇ ಇರಬೇಕು ಎಂದು ಡಿ ಕೆ ಸುರೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


