ಪಾಕಿಸ್ತಾನದ ಅಲ್ಪ ಸಂಖ್ಯಾತರ ಪರವಾಗಿ ಧನಿ ಎತ್ತಿ: ಮಲಾಲಾಗೆ ಶೋಭಾ ಕರಂದ್ಲಾಜೆ ಸಲಹೆ
ಕಾಶ್ಮೀರದ ಕುರಿತಂತೆ ಟ್ವೀಟ್ ಮಾಡಿ ಆತಂಕ ವ್ಯಕ್ತ ಪಡಿಸಿದ್ದ ಪಾಕಿಸ್ತಾನದ ಖ್ಯಾತ ಸಾಮಾಜಿಕ ಹೋರಾಟಗಾರ್ತಿ ಮಲಾಲಾ ಯೂಸುಫ್ ಝೈಗೆ ಕರ್ನಾಟಕದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಸಲಹೆ ನೀಡುವ ಮೂಲಕ ಟಾಂಗ್ ನೀಡಿದ್ದಾರೆ.

ನವದೆಹಲಿ: ಕಾಶ್ಮೀರದ ಕುರಿತಂತೆ ಟ್ವೀಟ್ ಮಾಡಿ ಆತಂಕ ವ್ಯಕ್ತ ಪಡಿಸಿದ್ದ ಪಾಕಿಸ್ತಾನದ ಖ್ಯಾತ ಸಾಮಾಜಿಕ ಹೋರಾಟಗಾರ್ತಿ ಮಲಾಲಾ ಯೂಸುಫ್ ಝೈಗೆ ಕರ್ನಾಟಕದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಸಲಹೆ ನೀಡುವ ಮೂಲಕ ಟಾಂಗ್ ನೀಡಿದ್ದಾರೆ.
ಕಾಶ್ಮೀರದ ವಿಚಾರವಾಗಿ ಈ ಹಿಂದೆ ಟ್ವೀಟ್ ಮಾಡಿದ್ದ ಮಲಾಲಾ, ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ದತಿಯಿಂದಾಗಿ ಕಾಶ್ಮೀರದಲ್ಲಿ ಸಂಘರ್ಷದ ಸ್ಥಿತಿ ನಿರ್ಮಾಣವಾಗಿದೆ. ಸಂಘರ್ಷದಲ್ಲಿ ಹೆಚ್ಚು ಸಮಸ್ಯೆಗೆ ತುತ್ತಾಗುವವರು ಮಹಿಳೆಯರು ಮತ್ತು ಮಕ್ಕಳಾಗಿರುವುದರಿಂದ ಕಾಶ್ಮೀರಿ ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಯ ಬಗ್ಗೆ ಆತಂಕವಿದೆ ಎಂದು ಟ್ವೀಟ್ ಮಾಡಿದ್ದರು.
ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು, ಮೊದಲು ಪಾಕಿಸ್ತಾನದ ಅಲ್ಪ ಸಂಖ್ಯಾತರ ಧನಿ ಎತ್ತಿ, ಅಲ್ಲಿ ನಡೆಯುವ ಬಲವಂತದ ಮತಾಂತರ ಮತ್ತು ಯುವತಿಯರ ಮೇಲಿನ ಕಿರುಕುಳದ ಕುರಿತು ಧನಿ ಎತ್ತಿ. ಅಲ್ಲಿನ ಯುವತಿಯರು ತಮ್ಮದೇ ನೆಲದಲ್ಲಿ ಆತಂಕದಲ್ಲಿ ಬದುಕುತ್ತಿದ್ದಾರೆ. ಕಾಶ್ಮೀರದಲ್ಲಿ ಅಭಿವೃದ್ದಿ ಅಜೆಂಡಾ ವೃದ್ದಿಯಾಗಿದೆಯೇ ಹೊರತು ಅಲ್ಲಿನ ಜನರ ಹಕ್ಕುಗಳಿಗೆ ಯಾವುದೇ ರೀತಿಯ ಚ್ಯುತಿ ಬಂದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


