ದೇಶ

ಕೆಲಸ ಇದೆ, ಆದರೆ ಉ.ಭಾರತೀಯರಿಗೆ ಕೌಶಲ್ಯ ಇಲ್ಲ: ವಿವಾದದ ಬಳಿಕ ಸ್ಪಷ್ಟನೆ ಕೊಟ್ಟ ಕಾರ್ಮಿಕ ಸಚಿವ

ಉತ್ತರ ಭಾರತ ಜನರ ಕೌಶಲ್ಯ ಕುರಿತಂತೆ ಹೇಳಿಕೆ ನೀಡಿ ಭಾರೀ ವಿರೋಧಕ್ಕೆ ಗುರಿಯಾಗಿದ್ದ ಕೇಂದ್ರ ಕಾರ್ಮಿಕ ಖಾತೆ ಸಚಿವ ಸಂತೋಷ್ ಗಂಗ್ವಾರ್ ಅವರು ಸೋಮವಾರ ತಮ್ಮ ಹೇಳಿಕೆ ಕುರಿತಂತೆ ಸ್ಪಷ್ಟನೆ ನೀಡಿದ್ದಾರೆ.

ಕೆಲಸ ಇದೆ, ಆದರೆ ಉ.ಭಾರತೀಯರಿಗೆ ಕೌಶಲ್ಯ ಇಲ್ಲ: ವಿವಾದದ ಬಳಿಕ ಸ್ಪಷ್ಟನೆ ಕೊಟ್ಟ ಕಾರ್ಮಿಕ ಸಚಿವ
ಕೇಂದ್ರ ಕಾರ್ಮಿಕ ಖಾತೆ ಸಚಿವ ಸಂತೋಷ್ ಗಂಗ್ವಾರ್
Published On :

ನವದೆಹಲಿ: ಉತ್ತರ ಭಾರತ ಜನರ ಕೌಶಲ್ಯ ಕುರಿತಂತೆ ಹೇಳಿಕೆ ನೀಡಿ ಭಾರೀ ವಿರೋಧಕ್ಕೆ ಗುರಿಯಾಗಿದ್ದ ಕೇಂದ್ರ ಕಾರ್ಮಿಕ ಖಾತೆ ಸಚಿವ ಸಂತೋಷ್ ಗಂಗ್ವಾರ್ ಅವರು ಸೋಮವಾರ ತಮ್ಮ ಹೇಳಿಕೆ ಕುರಿತಂತೆ ಸ್ಪಷ್ಟನೆ ನೀಡಿದ್ದಾರೆ. 

 ನಾನು ಹೇಳಿದ್ದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಜನರಲ್ಲಿ ಕೌಶಲ್ಯಗಳ ಕೊರತೆ ಎದುರಾಗಿದ್ದು, ಇದನ್ನು ನಿವಾರಿಸುವ ಸಲುವಾಗಿ ಸರ್ಕಾರ ಕೌಶಲ್ಯ ಅಭಿವೃದ್ಧಿ ಸಚಿವಾಲಯವನ್ನು ರಚಿಸಿದೆ. ಇದರಿಂದ ಮಕ್ಕಳಿಗೆ ಅಗತ್ಯವಿರುವ ಉದ್ಯೋಗಕ್ಕೆ ತಕ್ಕಂತೆ ತರಬೇತಿಯನ್ನು ನೀಡಲಾಗುತ್ತದೆ ಎಂದು ನಾನು ಹೇಳಿದ್ದೆ ಎಂದು ಹೇಳಿದ್ದಾರೆ. 

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸಚಿವ ಸಂತೋಷ್ ಅವರು, ದೇಶದಲ್ಲಿ ಬಹಳ ಉದ್ಯೋಗಾವಕಾಶಗಳಿದ್ದು, ಜನರಿಗೆ ಅದರಲ್ಲೂ ಉತ್ತರ ಭಾರತದ ಮಂದಿಗೆ ಕೌಶಲ್ಯದ ಕೊರತೆಯಿಂದಾಗಿ ಉದ್ಯೋಗ ಸಿಗುತ್ತಿಲ್ಲ ಎಂದು ಹೇಳಿದ್ದರು.
 
ದೇಶದಲ್ಲಿ ಯಾವುದೇ ಉದ್ಯೋಗಾವಕಾಶಗಳ ಕೊರತೆಯಿಲ್ಲ. ಉತ್ತರ ಭಾರತದಲ್ಲಿ ನೇಮಕಾತಿ ಬರುವ ಕಂಪನಿಗಳು ಲಭ್ಯವಿರುವ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿಗಳು ಸಿಗುತ್ತಿದ್ದ ಎನ್ನುತ್ತಿದ್ದಾರೆಂದು ಹೇಳಿದ್ದರು. ಈ ಹೇಳಿಕೆಗೆ ದೇಶದಾದ್ಯಂತ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.