ಜಮ್ಮು-ಕಾಶ್ಮೀರಕ್ಕೆ ಹೋಗಿ, ಆದರೆ ಯಾವುದೇ ರ್ಯಾಲಿ ನಡೆಸಬೇಡಿ; ಗುಲಾಂ ನಬಿ ಆಜಾದ್ ಗೆ 'ಸುಪ್ರೀಂ' ಆದೇಶ
ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರಿಗೆ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲು ಅವಕಾಶ ನೀಡಿದ ಸುಪ್ರೀಂ ಕೋರ್ಟ್ ಯಾವುದೇ ರಾಜಕೀಯ ರ್ಯಾಲಿ ನಡೆಸುವಂತಿಲ್ಲ ಎಂದು ಹೇಳಿದೆ.

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರಿಗೆ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲು ಅವಕಾಶ ನೀಡಿದ ಸುಪ್ರೀಂ ಕೋರ್ಟ್ ಯಾವುದೇ ರಾಜಕೀಯ ರ್ಯಾಲಿ ನಡೆಸುವಂತಿಲ್ಲ ಎಂದು ಹೇಳಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠ, ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಅವರು ನಾಲ್ಕು ಜಿಲ್ಲೆಗಳಾದ ಶ್ರೀನಗರ, ಜಮ್ಮು, ಬರಮುಲ್ಲಾ ಮತ್ತು ಅನಂತ್ ನಾಗ್ ಜಿಲ್ಲೆಗಳಿಗೆ ಭೇಟಿ ನೀಡಿ ಜನರನ್ನು ಭೇಟಿಯಾಗಬಹುದು ಎಂದು ಹೇಳಿದೆ.
ಆಜಾದ್ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಎ ಎಂ ಸಿಂಘ್ವಿ, ಜಮ್ಮು-ಕಾಶ್ಮೀರ ಜನತೆಯನ್ನು ಭೇಟಿ ಮಾಡಿ ಅವರ ಅಭಿವೃದ್ಧಿ ಬಗ್ಗೆ ವಿಚಾರಿಸಲು ಗುಲಾಂ ನಬಿ ಆಜಾದ್ ಬಯಸುತ್ತಿದ್ದಾರೆ ಎಂದರು.
ಈ ಹಿಂದೆ ಆಜಾದ್ ಅವರು ಮೂರು ಬಾರಿ ಜಮ್ಮುವಿಗೆ ಭೇಟಿ ನೀಡಲು ಪ್ರಯತ್ನಿಸಿದರೂ ವಿಮಾನ ನಿಲ್ದಾಣದಿಂದ ವಾಪಸ್ಸು ಕಳುಹಿಸಲಾಗಿತ್ತು ಎಂದಿದ್ದಾರೆ. ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಅರ್ಜಿಯಲ್ಲಿ ಗುಲಾಂ ನಬಿ ಆಜಾದ್ ತಮ್ಮ ಕುಟುಂಬ ವರ್ಗದವರನ್ನು ಮತ್ತು ಸಂಬಂಧಿಕರನ್ನು ಸಹ ಭೇಟಿ ಮಾಡಲು ಅವಕಾಶ ಕೋರಿದ್ದರು.
ಕೇಂದ್ರ ಸರ್ಕಾರ ಸಂವಿಧಾನ ವಿಧಿ 370 ರದ್ದುಪಡಿಸಿದ ನಂತರ ಜಮ್ಮು-ಕಾಶ್ಮೀರದ ಪರಿಸ್ಥಿತಿ ತಿಳಿಯಲು ಅಲ್ಲಿನ ಸಾಮಾಜಿಕ ಪರಿಸ್ಥಿತಿಯನ್ನು ತಿಳಿಯಲು ಭೇಟಿ ನೀಡಲು ಅವಕಾಶ ಕೋರಿ ಗುಲಾಂ ನಬಿ ಆಜಾದ್ ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


