ರಾಜಸ್ಥಾನದಲ್ಲಿ ಪಕ್ಷಾಂತರ ಪರ್ವ: ಕಾಂಗ್ರೆಸ್ ನಂಬಿಕೆಗೆ ಅರ್ಹವಲ್ಲ ಎಂಬುದು ಮತ್ತೆ ಸಾಬೀತು - ಮಾಯಾವತಿ
ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ರಾಜಸ್ಥಾನದ ಎಲ್ಲಾ ಆರು ಬಿಎಸ್ಪಿ ಶಾಸಕರೂ ಆಡಳಿತರೂಢ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ...

ಲಖನೌ: ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ರಾಜಸ್ಥಾನದ ಎಲ್ಲಾ ಆರು ಬಿಎಸ್ಪಿ ಶಾಸಕರೂ ಆಡಳಿತರೂಢ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ, ಕಾಂಗ್ರೆಸ್ ನಂಬಿಕೆಗೆ ಅರ್ಹವಲ್ಲ ಎಂಬುದನ್ನು ಮತ್ತೆ ಸಾಬೀತುಪಡಿಸಿದೆ ಎಂದು ಟೀಕಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮಾಯಾವತಿ, ಕಾಂಗ್ರೆಸ್, ಬಿಎಸ್ಪಿ ಶಾಸಕರನ್ನು ಖರೀದಿಸುವ ಮೂಲಕ ನಂಬಿಕೆಗೆ ಅರ್ಹವಲ್ಲದ ಪಕ್ಷ ಎಂಬುದನ್ನು ಮತ್ತೆ ಸಾಬೀತುಪಡಿಸಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬಿಎಸ್ಪಿ ತನ್ನ ಬೇಷರತ್ತಾದ ಬೆಂಬಲವನ್ನು ನೀಡಿದ್ದರೂ ಸಹ ಇದು ನಂಬಿಕೆ ದ್ರೋಹ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ತನ್ನ ಎದುರಾಳಿ ಬಿಜೆಪಿ ವಿರುದ್ಧ ಹೋರಾಡುವುದನ್ನು ಬಿಟ್ಟು, ತನಗೆ ಬೆಂಬಲವಾಗಿ ನಿಂತಿರುವ ಪಕ್ಷಗಳಿಗೇ ಹಾನಿ ಮಾಡುತ್ತಿದೆ. ಇದರಿಂದ ಕಾಂಗ್ರೆಸ್ ದಲಿತರ, ಪರಿಶಿಷ್ಟ ವರ್ಗಗಳ ಹಾಗೂ ಹಿಂದುಳಿದ ವರ್ಗದವರ ವಿರುದ್ಧವಿರುವುದು ಹಾಗೂ ಹಿಂದುಳಿದವರ ಹಕ್ಕಿನ ಬಗ್ಗೆ ಅದಕ್ಕಿರುವ ನಿರ್ಲಕ್ಷ್ಯತೆ ಗೊತ್ತಾಗುತ್ತದೆ ಎಂದು ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಪಕ್ಷವು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವಗಳಿಗೆ ವಿರುದ್ಧವಾಗಿದೆ. ಇದೇ ಕಾರಣಕ್ಕೆ ಅಂಬೇಡ್ಕರ್ ಅವರು ಕಾನೂನು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಎಂದೂ ಮಾಯಾವತಿ ದೂರಿದ್ದಾರೆ.
ಸೋಮವಾರ ತಡರಾತ್ರಿ ಬಹುಜನ ಸಮಾಜ ಪಕ್ಷದ ಎಲ್ಲಾ ಆರು ಶಾಸಕರಾದ ಸಂದೀಪ್ ಕುಮಾರ್, ರಾಜೇಂದ್ರ ಗುಧಾ, ದೀಪ್ ಚಂದ್, ಲಖನ್ ಸಿಂಗ್, ವಾಜಿಬ್ ಅಲಿ, ಮತ್ತು ಜೋಗಿಂದರ್ ಸಿಂಗ್ ಅವನಾ ಅವರು ಕಾಂಗ್ರೆಸ್ ಗೆ ಸೇರ್ಪಡೆಗೊಂಡ ಹಿನ್ನೆಲೆಯಲ್ಲಿ ಮಾಯಾವತಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


