ರಕ್ತದೊತ್ತಡ ಹಾಗೂ ಹೃದಯ ಬೇನೆ: ಆರ್‌ಎಂಎಲ್ ಆಸ್ಪತ್ರೆಗೆ ಡಿಕೆ ಶಿವಕುಮಾರ್ ದಾಖಲು!
ಅಕ್ರಮ ಆಸ್ತಿ ಪತ್ತೆ ಪ್ರಕರಣ ಸಂಬಂಧ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶದ ಬೆನ್ನಲ್ಲೇ ಡಿಕೆಶಿ ಅವರು ದೆಹಲಿಯ ಆರ್‌ಎಂಎಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನವದೆಹಲಿ: ಅಕ್ರಮ ಆಸ್ತಿ ಪತ್ತೆ ಪ್ರಕರಣ ಸಂಬಂಧ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶದ ಬೆನ್ನಲ್ಲೇ ಡಿಕೆಶಿ ಅವರು ದೆಹಲಿಯ ಆರ್‌ಎಂಎಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಅವರು ಡಿಕೆಶಿ ಜಾಮೀನು ಅರ್ಜಿಯ ವಿಚಾರಣೆಯನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಮುಂದೂಡಿದರು. ಅಲ್ಲದೆ 14 ದಿನಗಳ ಕಾಲ ಡಿಕೆಶಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶರು ಆದೇಶ ನೀಡಿದರು.
ಈ ವೇಳೆ ತೀವ್ರ ರಕ್ತದೊತ್ತಡ ಹಾಗೂ ಹೃದಯ ಬೇನೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ಆರ್‌ಎಂಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಸತತ ಎರಡು ಗಂಟೆಗಳ ತಪಾಸಣೆ ನಂತರ ಡಿಕೆ ಶಿವಕುಮಾರ್ ಅವರನ್ನು ತೀವ್ರ ತುರ್ತು ನಿಗಾ ಘಟಕಕ್ಕೆ ದಾಖಲಿಸಲಾಗಿದೆ.
ಇನ್ನು ಡಿಕೆ ಶಿವಕುಮಾರ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ಬುಧವಾರ ಮಧ್ಯಾಹ್ನ ನಡೆಯಲಿದೆ. ಜಾಮೀನು ಸಿಕ್ಕರೆ ಬಿಡುಗಡೆಯಾಗಲಿದ್ದು ಇಲ್ಲದಿದ್ದರೆ ತಿಹಾರ್ ಜೈಲು ಪಾಲಾಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


