ಯಾವುದೇ ರಾಜಕೀಯ ಪಕ್ಷ ಸೇರಲ್ಲ- ಉರ್ಮಿಳಾ ಮಾತೋಂಡ್ಕರ್
ಇತ್ತೀಚಿಗೆ ಕಾಂಗ್ರೆಸ್ ಪಕ್ಷ ತೊರೆದಿದ್ದ ಬಾಲಿವುಡ್ ನಟಿ, ರಾಜಕಾರಣಿ ಉರ್ಮಿಳಾ ಮಾತೋಂಡ್ಕರ್ ಶಿವಸೇನೆ ಸೇರಲಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ಈ ವದಂತಿಗಳನ್ನು ಅಲ್ಲಗಳೆದಿರುವ ಉರ್ಮಿಳಾ, ತಾನು ಯಾವುದೇ ರಾಜಕೀಯ ಪಕ್ಷವನ್ನು ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮುಂಬೈ: ಇತ್ತೀಚಿಗೆ ಕಾಂಗ್ರೆಸ್ ಪಕ್ಷ ತೊರೆದಿದ್ದ ಬಾಲಿವುಡ್ ನಟಿ, ರಾಜಕಾರಣಿ ಉರ್ಮಿಳಾ ಮಾತೋಂಡ್ಕರ್ ಶಿವಸೇನೆ ಸೇರಲಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ಈ ವದಂತಿಗಳನ್ನು ಅಲ್ಲಗಳೆದಿರುವ ಉರ್ಮಿಳಾ, ತಾನು ಯಾವುದೇ ರಾಜಕೀಯ ಪಕ್ಷವನ್ನು ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ತೊರೆದ ನಂತರ ಉದ್ದವ್ ಠಾಕ್ರೆ ಆಪ್ತ ಮಿಲಿಂದಾ ನರ್ವೆಕರ್ ಅವರ ಜೊತೆ ಸಂಪರ್ಕದಲ್ಲಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಉರ್ಮಿಳಾ ಮಾತೋಂಡ್ಕರ್ ಈ ರೀತಿಯ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಆಡಳಿತವಿರುವ ಮಹಾರಾಷ್ಟ್ರದಲ್ಲಿ ಮುಂದಿನ ತಿಂಗಳು ಆಸೆಂಬ್ಲಿ ಚುನಾವಣೆ ನಡೆಯಲಿದ್ದು, ಉರ್ಮಿಳಾ ಶಿವಸೇನೆ ಸೇರಲಿದ್ದಾರೆ ಎಂಬಂತಹ ಮಾತುಗಳು ಮುನ್ನೆಲೆಗೆ ಬಂದಿದ್ದವು.
ಲೋಕಸಭಾ ಚುನಾವಣೆಯಲ್ಲಿ ಮುಂಬೈ ಉತ್ತರ ಲೋಕಸಭಾ ಕ್ಷೇತ್ರದಿಂದ ಚೊಚ್ಚಲ ಬಾರಿಗೆ ಸ್ಪರ್ಧಿಸಿದ್ದ ಉರ್ಮಿಳಾ ಬಿಜೆಪಿ ಅಭ್ಯರ್ಥಿ ಗೋಪಾಲ್ ಶೆಟ್ಟಿ ವಿರುದ್ಧ ಸೋತಿದ್ದರು. ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಸಮಸ್ಯೆಗಳಿಂದಾಗಿ ಇದೇ ತಿಂಗಳ 10 ರಂದು ಉರ್ಮಿಳಾ ಮಾತೋಂಡ್ಕರ್ ಗುಡ್ ಬೈ ಹೇಳಿದ್ದರು.
ಇತರ ಯಾವುದೇ ಪಕ್ಷಗಳಿಗೂ ಸೇರಿಲ್ಲ. ಈ ರೀತಿಯ ಸುದ್ದಿಗಳನ್ನು ದಯವಿಟ್ಟು ಪ್ರಕಟಿಸಬೇಡಿ ಎಂದು ಮಾಧ್ಯಮಗಳಲ್ಲಿಉರ್ಮಿಳಾ ಮಾತೋಂಡ್ಕರ್ ಮನವಿ ಮಾಡಿಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


