ಸೆ. 20ರಂದು ಎಡ ಪಕ್ಷಗಳ ರಾಷ್ಟ್ರೀಯ ಸಮಾವೇಶ
ದೇಶದ ಆರ್ಥಿಕ ಬಿಕ್ಕಟ್ಟು ಮತ್ತು ಜನರ ಮೇಲೆ ಹೆಚ್ಚುತ್ತಿರುವ ಸಂಕಷ್ಟಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಎಡಪಕ್ಷಗಳು ಇದೇ 20ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೃಹತ್ ರಾಷ್ಟ್ರೀಯ ಸಮಾವೇಶ ಹಮ್ಮಿಕೊಂಡಿದೆ.

ನವದೆಹಲಿ: ದೇಶದ ಆರ್ಥಿಕ ಬಿಕ್ಕಟ್ಟು ಮತ್ತು ಜನರ ಮೇಲೆ ಹೆಚ್ಚುತ್ತಿರುವ ಸಂಕಷ್ಟಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಎಡಪಕ್ಷಗಳು ಇದೇ 20ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೃಹತ್ ರಾಷ್ಟ್ರೀಯ ಸಮಾವೇಶ ಹಮ್ಮಿಕೊಂಡಿದೆ.
ಐದು ಎಡಪಕ್ಷಗಳಾದ ಸಿಪಿಐ(ಎಂ), ಸಿಪಿಐ, ಸಿಪಿಐ(ಎಂಎಲ್) ಲಿಬರೇಷನ್, ಫಾರ್ವರ್ಡ್ ಬ್ಲಾಕ್ ಮತ್ತು ಆರ್ ಎಸ್ ಪಿ ಸಹಯೋಗದಲ್ಲಿ ಸೆಪ್ಟೆಂಬರ್ 20ರಂದು ದೆಹಲಿಯಲ್ಲಿ ಜಂಟಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.
ತೀವ್ರ ಆರ್ಥಿಕ ಬಿಕ್ಕಟ್ಟು ಮತ್ತು ಸಾರ್ಜಜನಿಕರ ಮೇಲೆ ಹೆಚ್ಚೆಚ್ಚು ಪ್ರಮಾಣದಲ್ಲಿ ಹೇರಲಾಗುತ್ತಿರುವ ಸಂಕಟಗಳು, ದೊಡ್ಡ ಪ್ರಮಾಣದ ಉದ್ಯೋಗ ನಷ್ಟದ ವಿರುದ್ಧ ರಾಷ್ಟ್ರ ಮಟ್ಟದ ಪ್ರತಿಭಟನೆಯನ್ನು ಕಾನ್ಸ್ಟಿಟ್ಯೂಷನ್ ಕ್ಲಬ್ ಸಭಾಂಗಣದಲ್ಲಿ ಏರ್ಪಡಿಸಲಾಗುವುದು ಎಂದು ಈ ಐದು ಎಡಪಕ್ಷಗಳು ಜಂಟಿ ಹೇಳಿಕೆಯಲ್ಲಿ ಪ್ರಕಟಿಸಿವೆ.
ಹಣಕಾಸು ಮಂತ್ರಿಗಳು ಇತ್ತೀಚೆಗೆ ಪ್ರಕಟಿಸಿರುವ 70 ಸಾವಿರ ಕೋಟಿ ರೂಪಾಯಿಗಳ ಬೃಹತ್ ಮೊತ್ತದ ಹಲವು ಕ್ರಮಗಳು ಜನರಿಗೆ ಪರಿಹಾರ ಕೊಡುವುದು ಒತ್ತಟ್ಟಿಗಿರಲಿ, ಅವು ಬಿಕ್ಕಟ್ಟನ್ನು ಇನ್ನಷ್ಟು ಹೆಚ್ಚಿಸಲಿವೆ. ಮೂಲ ರಚನೆಗಳ ಮೇಲೆ ಸಾರ್ವಜನಿಕ ಹೂಡಿಕೆಗಳನ್ನು ಹೆಚ್ಚಿಸುವುದು, ಉದ್ಯೋಗಾವಕಾಶಗಳನ್ನು ನಿರ್ಮಿಸುತ್ತಲೇ ಜನರ ಕೈಯಲ್ಲಿ ಖರೀದಿ ಸಾಮರ್ಥ್ಯವನ್ನು ಹೆಚ್ಚಿಸಬೇಕಾಗಿರುವುದು ಈಗಿನ ಅಗತ್ಯವಾಗಿದೆ ಎಂದು ಪಕ್ಷಗಳು ಹೇಳಿವೆ.
ಎಡಪಕ್ಷಗಳ ಈ ರಾಷ್ಟ್ರೀಯ ಸಮಾವೇಶದಲ್ಲಿ ಪಾಲ್ಗೊಳ್ಳುವ ಮೂಲಕ ಎಲ್ಲ ಪ್ರಜಾಪ್ರಭುತ್ವವಾದಿ ಶಕ್ತಿಗಳು ಮುಂದೆ ಬಂದು ಜನತಾ ಆಂದೋಲನವನ್ನು ಬಲಪಡಿಸಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


