ಗರ್ಭನಿರೋಧಕ ಮಹತ್ವ ಇಂದು ಅರ್ಥವಾಗಿದೆ; ಪ್ರಧಾನಿ ಮೋದಿ ಹುಟ್ಟಿನ ಬಗ್ಗೆ ವ್ಯಂಗ್ಯ ಟ್ವೀಟ್, ಪಾಕ್ ಸಚಿವನಿಗೆ ಮಂಗಳಾರತಿ!
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಆರ್ಟಿಕಲ್ 370 ರದ್ದು ಮಾಡಿದ ಬಳಿಕ ತಮ್ಮ ಬುಡಕ್ಕೆ ಬೆಂಕಿ ಬಿದ್ದಂತೆ ಪಾಕ್ ಸಚಿವರು ಮಾತುಗಳನ್ನಾಡುತ್ತಿದ್ದಾರೆ. ಈ ಮಧ್ಯೆ ಪಾಕ್ ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬಕ್ಕೆ ವ್ಯಂಗ್ಯದ ಟ್ವೀಟ್ ಮಾಡಿ ನೆಟಿಗರಿಂದ ಟ್ರೋಲ್ ಗೆ ಗುರಿಯಾಗಿದ್ದಾರೆ.

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಆರ್ಟಿಕಲ್ 370 ರದ್ದು ಮಾಡಿದ ಬಳಿಕ ತಮ್ಮ ಬುಡಕ್ಕೆ ಬೆಂಕಿ ಬಿದ್ದಂತೆ ಪಾಕ್ ಸಚಿವರು ಮಾತುಗಳನ್ನಾಡುತ್ತಿದ್ದಾರೆ. ಈ ಮಧ್ಯೆ ಪಾಕ್ ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬಕ್ಕೆ ವ್ಯಂಗ್ಯದ ಟ್ವೀಟ್ ಮಾಡಿ ನೆಟಿಗರಿಂದ ಟ್ರೋಲ್ ಗೆ ಗುರಿಯಾಗಿದ್ದಾರೆ.
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪಾಕಿಸ್ತಾನದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಫವಾದ್ ಹುಸೈನ್ ಟ್ವೀಟ್ ಮಾಡಿದ್ದು ಗರ್ಭನಿರೋಧಕಗಳ ಮಹತ್ವ ಇಂದು ನಮಗೆ ಅರ್ಥವಾಗಿದೆ #ಮೋದಿ ಬರ್ತ್ ಡೇ ಎಂದು ಟ್ವೀಟ್ ಮಾಡಿದ್ದಾರೆ.
ಇಂದು? ವರ್ಷದಲ್ಲಿ ಕೇವಲ ಒಂದು ದಿನ? ನಿಮ್ಮ ಟ್ವೀಟ್‌ಗಳು ಮತ್ತು ಮುಖವು ಗರ್ಭನಿರೋಧಕಗಳ ಪ್ರಾಮುಖ್ಯತೆಯನ್ನು 24x7 ವರ್ಷದಲ್ಲಿ 365 ದಿನಗಳು ನಮಗೆ ನೆನಪಿಸುತ್ತದೆ. ಮಗುವಿನಂತಾ ಮೆದುಳನ್ನು ಹೊಂದಿದ್ದಾನೆ. ಇಂತಹವನು ಪಾಕಿಸ್ತಾನದ ವಿಜ್ಞಾನ ಮತ್ತು ತಂತ್ರಜ್ಞಾನದ ಮಂತ್ರಿ ಎಂದು ನೆಟಿಗರು ಕಾಲೆಳೆಯುತ್ತಿದ್ದಾರೆ.
U do have a brain of a kid.. my goodness..and that's the minister of science and technology of pakistan
—
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


