ಭವಿಷ್ಯದಲ್ಲಿ ಪಿಒಕೆ ಮೇಲೆ ಭಾರತ ಕಾನೂನುಬದ್ದ ಹಕ್ಕು ಹೊಂದಲಿದೆ: ಜೈಶಂಕರ್
ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಭಾರತದ ಭಾಗವಾಗಿದ್ದು ಮುಂದೊಂದು ದಿನ ಅದರ ಮೇಲೆ ಕಾನೂನು ಬದ್ದ ಹಕ್ಕು ಹೊಂದುವುದನ್ನು ಭಾರತ ನಿರೀಕ್ಷಿಸುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ

ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಭಾರತದ ಭಾಗವಾಗಿದ್ದು ಮುಂದೊಂದು ದಿನ ಅದರ ಮೇಲೆ ಕಾನೂನು ಬದ್ದ ಹಕ್ಕು ಹೊಂದುವುದನ್ನು ಭಾರತ ನಿರೀಕ್ಷಿಸುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ
"ಪಿಒಕೆ ಬಗ್ಗೆ ನಮ್ಮ ನಿಲುವು ಸ್ಪಷ್ಟವಾಗಿದೆ, ಅದು ಭಾರತದ ಭಾಗವಾಗಿದೆ ಮತ್ತು ಒಂದು ದಿನ ನಾವು ಅದರ ಮೇಲೆ ನ್ಯಾಯಯುತವಾದ ಹಕ್ಕನ್ನು ಪಡೆಯುತ್ತೇವೆಎಂದು ನಾವು ನಿರೀಕ್ಷಿಸುತ್ತೇವೆ" ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಇನ್ನು ಮುಂದೆ ಪಾಕಿಸ್ತಾನದೊಂದಿಗಿನ ಮಾತುಕತೆ ಇದ್ದರೆ ಅದು ಪಿಒಕೆ ಬಗ್ಗೆ ಮಾತ್ರವೇ ಹೊರತು ಕಾಶ್ಮೀರದ ಬಗ್ಗೆ ಅಲ್ಲ ಎಂದು ಅವರು ಹೇಳಿದ್ದಾರೆ.
ಕಾಶ್ಮೀರ ಸಮಸ್ಯೆಯನ್ನು ಅಂತರರಾಷ್ಟ್ರೀಯ ವ್ಯಾಪ್ತಿಗೆ ಒಯ್ಯಲು ಪಾಕಿಸ್ತಾನ ಪ್ರಯತ್ನಿಸಿದ ನಂತರ ಇತ್ತೀಚಿನ ದಿನಗಳಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಈ ಬಗ್ಗೆ ಹೇಳಿಕೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


