ರೈಲ್ವೆ ನೌಕರರಿಗೆ 78 ದಿನಗಳ ಬೋನಸ್ ಘೋಷಣೆ
ಕೇಂದ್ರ ಸರ್ಕಾರ ಸತತ ಆರನೇ ವರ್ಷವೂ 11,52,000 ರೈಲ್ವೆ ನೌಕರರಿಗೆ 78 ದಿನಗಳ ಬೋನಸ್ ಅನ್ನು ಬುಧವಾರ ಘೋಷಿಸಿದೆ.

ನವದೆಹಲಿ: ಕೇಂದ್ರ ಸರ್ಕಾರ ಸತತ ಆರನೇ ವರ್ಷವೂ 11,52,000 ರೈಲ್ವೆ ನೌಕರರಿಗೆ 78 ದಿನಗಳ ಬೋನಸ್ ಅನ್ನು ಬುಧವಾರ ಘೋಷಿಸಿದೆ.
ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಈ ಕ್ರಮದಿಂದಾಗಿ ಸರ್ಕಾರದ ಬೊಕ್ಕಸಕ್ಕೆ 2,024 ಕೋಟಿ ರೂ. ವ್ಯಯವಾಗಲಿದೆ.
ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ರೈಲ್ವೆ ಇಲಾಖೆಯ ಉತ್ಪಾದಕತೆಯಲ್ಲಿ ಲಾಭ ತಂದುಕೊಟ್ಟ ಕಾರ್ಮಿಕರಿಗೆ ಪ್ರತಿಫಲ ನೀಡುವುದು ನಮ್ಮ ನಿರ್ಧಾರವಾಗಿದೆ ಎಂದು ಸುದ್ದಿಗಾರರಿಗೆ ಹೇಳಿದರು.
'ದೇಶದ ಜೀವಸೆಲೆ' ಆಗಿರುವ ಸಂಸ್ಥೆಯನ್ನು ನಡೆಸುವಲ್ಲಿ ರೈಲ್ವೆ ನೌಕರರು ನೀಡಿದ ಕೊಡುಗೆಗಾಗಿ ಕಳೆದ ಆರು ವರ್ಷಗಳಿಂದ ಸರ್ಕಾರ ಸತತವಾಗಿ ಬೋನಸ್ ನೀಡುತ್ತಾ ಬಂದಿದೆ ಎಂದು ಅವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


