ಇ-ಸಿಗರೇಟ್ ಮಾರಾಟ, ಉತ್ಪಾದನೆ ನಿಷೇಧ: ಕೇಂದ್ರ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ
ದೇಶದಲ್ಲಿ ಇ-ಸಿಗರೇಟ್ ಮಾರಾಟ, ಉತ್ಪಾದನೆ, ಆಮದು ಮತ್ತು ವಿತರಣೆ ನಿಷೇಧಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ.

ನವದೆಹಲಿ: ದೇಶದಲ್ಲಿ ಇ-ಸಿಗರೇಟ್ ಮಾರಾಟ, ಉತ್ಪಾದನೆ, ಆಮದು ಮತ್ತು ವಿತರಣೆ ನಿಷೇಧಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ.
ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ದೇಶದಲ್ಲಿ ಇ-ಸಿಗರೇಟ್ ನಿಷೇಧಕ್ಕೆ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಇ-ಸಿಗರೇಟ್ ಆಮದು, ಉತ್ಪಾದನೆ, ವಿತರಣೆ, ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದರು.
ಧೂಮಪಾನದ ಚಟ ಬಿಡುವುದಕ್ಕೆ ಸಹಕಾರಿ ಎಂದು ಹೇಳಲಾಗುವ ಇ-ಸಿಗರೇಟ್ ಗಳನ್ನು ವಿಶ್ವಾದ್ಯಂತ ಅಪಾಯವಿಲ್ಲದ ಸರಕೆಂದು ಪರಿಗಣಿಸಿ ಮಾರಾಟ ಮಾಡಲಾಗುತ್ತಿದೆ. ಆದರೆ ತಜ್ಞರ ಹೇಳಿಕೆಯ ಪ್ರಕಾರ ಇ-ಸಿಗರೇಟ್ ಗಳೂ ಆರೋಗ್ಯಕ್ಕೆ ಹಾನಿಕಾರಕವೇ ಆಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇ-ಸಿಗರೇಟ್ ಗಳನ್ನು ನಿಷೇಧಿಸಿದೆ.
ಇ-ಸಿಗರೇಟ್‌ನ ಚಟಕ್ಕೆ ಅಂಟಿಕೊಂಡವರಿಗೆ ಅದು ಆಹ್ಲಾದಕರ ಎನಿಸುತ್ತದೆ ಎಂದು ವರದಿಗಳು ಹೇಳುತ್ತವೆ. ಮೂಲಗಳ ಪ್ರಕಾರ ದೇಶದಲ್ಲಿ 400ಕ್ಕೂ ಅಧಿಕ ಇ-ಸಿಗರೇಟ್ ಬ್ರಾಂಡ್‌ಗಳಿವೆ. ಆದರೆ ಯಾವ ಇ-ಸಿಗರೇಟ್ ಕೂಡಾ ಭಾರತದಲ್ಲಿ ತಯಾರಿಕೆಯಾಗುತ್ತಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


