ದೇಶ

ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಆರೋಪಿ ಸ್ವಾಮಿ ಚಿನ್ಮಯಾನಂದ ಆರೋಗ್ಯ ಸ್ಥಿತಿ ಗಂಭೀರ

ಉತ್ತರ ಪ್ರದೇಶದ ಕಾನೂನು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಸ್ವಾಮಿ ಚಿನ್ಮಯಾನಂದ ಅವರ ಆರೋಗ್ಯ ಗಂಭೀರವಾಗಿದೆ ಎಂದು ವರದಿಯಾಗಿದೆ.

ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಆರೋಪಿ ಸ್ವಾಮಿ ಚಿನ್ಮಯಾನಂದ ಆರೋಗ್ಯ ಸ್ಥಿತಿ ಗಂಭೀರ
ಚಿನ್ಮಯಾನಂದ್
Published On :

ಶಹಜಾನಪುರ್: ಉತ್ತರ ಪ್ರದೇಶದ ಕಾನೂನು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಸ್ವಾಮಿ ಚಿನ್ಮಯಾನಂದ ಅವರ ಆರೋಗ್ಯ ಗಂಭೀರವಾಗಿದೆ ಎಂದು ವರದಿಯಾಗಿದೆ.

ಸ್ವಾಮಿ ಚಿನ್ಮಯಾನಂದ ಅವರ ಆರೋಗ್ಯ ಕುರಿತು ತಜ್ಞ ವೈದ್ಯರ ತಂಡ ನಿಗಾವಹಿಸಿದ್ದು, ಅವರ ರಕ್ತದಲ್ಲಿ ಸಕ್ಕರೆ  ಏರುಪೇರಾಗುತ್ತಿರುವುದು ಚಿಕಿತ್ಸೆ ಕಲ್ಪಿಸಲು ಸಮಸ್ಯೆಯಾಗುತ್ತಿದೆ ಎಂದು ಹೇಳಿದ್ದಾರೆ.

ಸೋಮವಾರ ರಾತ್ರಿ ದಿಢೀರ್ ಅಸ್ವಸ್ಥಗೊಂಡ ಸ್ವಾಮಿ ಅವರಿಗೆ ನಿವಾಸದಲ್ಲೇ ವೈದ್ಯರು ಚಿಕಿತ್ಸೆ ಕಲ್ಪಿಸುತ್ತಿದ್ದಾರೆ. 

ಸಂತ್ರಸ್ಥೆ ಕಾನೂನು ವಿದ್ಯಾರ್ಥಿನಿ, ಸೋಮವಾರ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಿ, ಬಿಜೆಪಿ ನಾಯಕ ಸ್ವಾಮಿ ಚಿನ್ಮಯಾನಂದ  ಹಲವು ಬಾರಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದರು. ವಿಡಿಯೋ  ತೋರಿಸಿ  ಬ್ಲಾಕ್ ಮೇಲ್ ಮಾಡುತ್ತಿದ್ದರು ಎಂದು  ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಿ ಕೆಲವು ಪುರಾವೆ ಒದಗಿಸಿದ್ದರು. 

ಆಕೆ ತನ್ನ ಹೇಳಿಕೆಯನ್ನು ಅಪರಾಧ ದಂಡ ಸಂಹಿತೆ ಸೆಕ್ಷನ್ 164ರಡಿ ದಾಖಲಿಸಿದ್ದು, ಪೊಲೀಸರು ತಕ್ಷಣವೇ ಸ್ವಾಮಿ ಅವರನ್ನು  ಬಂಧಿಸಬೇಕಿದೆ. ಪೊಲೀಸರು ಚಿನ್ಮಯಾನಂದ ವಿರುದ್ದ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ನೋಡಿದರೆ  ಪೊಲೀಸರ ಕಾರ್ಯನಿರ್ಹಹಣೆಯ ಮೇಲೆಯೇ ಸಂಶಯ ಬರುತ್ತಿದೆ ಎಂದು ಸಂತ್ರಸ್ಥೆಯ ಕುಟುಂಬ ಸದಸ್ಯರು  ದೂರಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದಂತೆ ಚಿನ್ಮಯಾನಂದ ಪ್ರಕರಣದ ತನಿಖೆಗೆ ಎಸ್ ಐಟಿ ರಚಿಸಲಾಗಿದ್ದು, ಸರ್ಕಾರಕ್ಕೂ ತನಿಖೆಗೂ ಯಾವುದೇ ಸಂಬಂಧ ಇಲ್ಲ ಎಂದು  ಸರ್ಕಾರ ಹೇಳಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.