ವೀರ್ ಸಾವರ್ಕರ್ ಪ್ರಧಾನಿಯಾಗಿದ್ದರೆ ಪಾಕಿಸ್ತಾನ ಉದಯಿಸುತ್ತಿರಲಿಲ್ಲ: ಉದ್ಧವ್ ಠಾಕ್ರೆ
ಹಿಂದುತ್ವ ಸಿದ್ಧಾಂತ ಪ್ರತಿಪಾದಕ ವೀರ್ ಸಾವರ್ಕರ್ ಪ್ರಧಾನಮಂತ್ರಿಯಾಗಿದ್ದರೆ ಪಾಕಿಸ್ಥಾನ ಹುಟ್ಟುತ್ತಿರಲಿಲ್ಲ ಎಂದು ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ಹೇಳಿದ್ದಾರೆ.

ಮುಂಬಯಿ: ಹಿಂದುತ್ವ ಸಿದ್ಧಾಂತ ಪ್ರತಿಪಾದಕ ವೀರ್ ಸಾವರ್ಕರ್ ಪ್ರಧಾನಮಂತ್ರಿಯಾಗಿದ್ದರೆ ಪಾಕಿಸ್ಥಾನ ಹುಟ್ಟುತ್ತಿರಲಿಲ್ಲ ಎಂದು ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ಹೇಳಿದ್ದಾರೆ.
ಸಾವರ್ಕರ್ ಜೀವನ ಚರಿತ್ತೆ “ಎಕೋಸ್ ಫ್ರಮ್ ಎ ಫರ್ ಗಾಟನ್ ಫಾಸ್ಟ್” ಬಿಡುಗಡೆ ಸಂದರ್ಭದಲ್ಲಿ ಮಾತನಾಡಿದ ಅವರು ಎನ್ ಡಿ ಎ ಸರಕಾರ ಹಿಂದುತ್ವ ಪರವಾಗಿದ್ದು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ವೀರ್ ಸಾವರ್ಕರ್ ಅವರಿಗೆ ನೀಡಬೇಕೆಂದು ಇದೇ ವೇಳೆ ಒತ್ತಾಯಿಸಿದರು.
ದೇಶದ ಅಭಿವೃದ್ದಿಗಾಗಿ ಮಹಾತ್ಮ ಗಾಂಧೀಜಿ ಮತ್ತು ಭಾರತದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ನೀಡಿದ ಕೊಡುಗೆಯನ್ನು ಎಂದಿಗೂ ಅಲ್ಲಗೆಳೆಯುವುದಿಲ್ಲ, ಆದರೇ ರಾಜಕಾರಣ ಎಂಬುದು ಎರಡು ಕುಟುಂಬಗಳಿಗೆ ಸೀಮಿತವಾಗಬಾರದು ಎಂದು ಹೇಳಿದ್ದಾರೆ,
ದೇಶದ ಆಭಿವೃದ್ಧಿಗಾಗಿ ಪಣತೊಡುವವರು ರಾಜಕಾರಣಿಯಾಗಿ ಬರಲು ಅವಕಾಶ ಸಿಗಬೇಕೆಂದು ಎಂದು ಅಭಿಪ್ರಾಯಪಟ್ಟರು. 14 ವರುಷಗಳ ಕಾಲ ಜೈಲಿನಲ್ಲಿದ್ದ ವೀರ್ ಸಾವರ್ಕರ್ ರಂತೆ ಕೇವಲ 14 ನಿಮಿಷ ನೆಹರೂ ಜೈಲಿನಲ್ಲಿದ್ದರೆ ಅವರನ್ನು ‘ವೀರ್’ ಎಂದು ಕರೆಯುತ್ತಿದ್ದೆ ಎಂದು ಇದೇ ವೇಳೆ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


