ಇ-ಸಿಗರೇಟ್ ನಿಷೇಧಕ್ಕೆ ಕೇಂದ್ರ ಸರ್ಕಾರ ಚಿಂತನೆ: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಘೋಷಣೆ ಸಾಧ್ಯತೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸೆ.18 ರಂದು ಕೇಂದ್ರ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಮಹತ್ವದ ನಿರ್ಣಯಗಳು, ಸುಗ್ರೀವಾಜ್ಞೆಗಳ ನಿರೀಕ್ಷೆ ಇದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸೆ.18 ರಂದು ಕೇಂದ್ರ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಮಹತ್ವದ ನಿರ್ಣಯಗಳು, ಸುಗ್ರೀವಾಜ್ಞೆಗಳ ನಿರೀಕ್ಷೆ ಇದೆ.
ಇ-ಸಿಗರೇಟ್ ಆಮದು, ಉತ್ಪಾದನೆ, ವಿತರಣೆಗಳಿ, ಮಾರಾಟಕ್ಕೆ ನಿಷೇಧ ವಿಧಿಸಲು ಕೇಂದ್ರ ಸಚಿವ ಸಂಪುಟ ಸಭೆ ಆದೇಶ ಹೊರಡಿಸಲಿದೆ ಎಂದು ರಾಷ್ಟ್ರೀಯ ಮಾಧ್ಯಮದ ವರದಿಯಿಂದ ತಿಳಿದುಬಂದಿದೆ. ಧೂಮಪಾನದ ಚಟ ಬಿಡುವುದಕ್ಕೆ ಸಹಕಾರಿ ಎಂದು ಹೇಳಲಾಗುವ ಇ-ಸಿಗರೇಟ್ ಗಳನ್ನು ವಿಶ್ವಾದ್ಯಂತ ಅಪಾಯವಿಲ್ಲದ ಸರಕೆಂದು ಪರಿಗಣಿಸಿ ಮಾರಾಟ ಮಾಡಲಾಗುತ್ತಿದೆ.
ಆದರೆ ತಜ್ಞರ ಹೇಳಿಕೆಯ ಪ್ರಕಾರ ಇ-ಸಿಗರೇಟ್ ಗಳೂ ಆರೋಗ್ಯಕ್ಕೆ ಹಾನಿಕಾರಕವೇ ಆಗಿದೆ. ಈ ಹಿನ್ನೆಲೆಯಲ್ಲಿ ಇ-ಸಿಗರೇಟ್ ಗಳ ನಿಷೇಧಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


