ಉದ್ಯೋಗ ಭದ್ರತೆ ಆಗ್ರಹಿಸಿ ಅ 22 ರಂದು ಬ್ಯಾಂಕ್ ಮುಷ್ಕರ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಕ್ಟೋಬರ್ 22 ರಂದು ಮುಷ್ಕರ ನಡೆಸುವುದಾಗಿ ಭಾರತೀಯ ಬ್ಯಾಂಕ್ ಸಂಘ (ಐಬಿಎ) ಅಧ್ಯಕ್ಷ ಸುನಿಲ್ ಮೆಹ್ತಾ ಮತ್ತು ಕೇಂದ್ರ ಮುಖ್ಯ ಕಾರ್ಮಿಕ ಆಯುಕ್ತ ರಾಜನ್ ವರ್ಮಾ ಅವರುಗಳಿಗೆ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ (ಎಐಬಿಇಎ) ಮತ್ತು ಭಾರತದ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟ (ಬಿಇಎಫ್ಐ) ತಿಳಿಸಿದೆ.

ಹೈದರಾಬಾದ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಕ್ಟೋಬರ್ 22 ರಂದು ಮುಷ್ಕರ ನಡೆಸುವುದಾಗಿ ಭಾರತೀಯ ಬ್ಯಾಂಕ್ ಸಂಘ (ಐಬಿಎ) ಅಧ್ಯಕ್ಷ ಸುನಿಲ್ ಮೆಹ್ತಾ ಮತ್ತು ಕೇಂದ್ರ ಮುಖ್ಯ ಕಾರ್ಮಿಕ ಆಯುಕ್ತ ರಾಜನ್ ವರ್ಮಾ ಅವರುಗಳಿಗೆ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ (ಎಐಬಿಇಎ) ಮತ್ತು ಭಾರತದ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟ (ಬಿಇಎಫ್ಐ) ತಿಳಿಸಿದೆ.
ಆರು ಪ್ರಮುಖ ಬೇಡಿಕೆಗಾಳಾದ – ಬ್ಯಾಂಕಿಂಗ್ ಸುಧಾರಣಾ ಕ್ರಮದ ನೆಪದಲ್ಲಿ ಬ್ಯಾಂಕ್ ಗಳ ವಿಲೀನ ತಡೆ, ಕೆಟ್ಟ ಸಾಲಗಳ ವಾಪಸಾತಿ ಖಾತರಿ, ಸುಸ್ತಿದಾರರ ವಿರುದ್ಧ ಕಠಿಣ ಕ್ರಮ - ಗ್ರಾಹಕರಿಗೆ ದಂಡದಂತಹ ಕಿರುಕುಳ ತಡೆ, ಸೇವಾ ಶುಲ್ಕ ಹೆಚ್ಚಳ ನಿಯಂತ್ರಣ, ಠೇವಣಿಗಳ ಮೇಲಿನ ಬಡ್ಡಿ ದರ ಹೆಚ್ಚಳ, ಉದ್ಯೋಗ ಭದ್ರತೆಗೆ ಆಗ್ರಹಿಸಿ ಅ 22 ರ ಬೆಳಗ್ಗೆ 6 ರಿಂದ ಅ 23 ರ ಬೆಳಗ್ಗೆ 6 ಗಂಟೆವರೆಗೆ ಮುಷ್ಕರ ನಡೆಸಲಾಗುವುದು ಎಂದು ಎಐಬಿಎ ಪ್ರಧಾನ ಕಾರ್ಯದರ್ಶಿ ವೆಂಕಟಾಚಲಂ ಮತ್ತು ಬಿಇಎಫ್ಐ ಪ್ರಧಾನ ಕಾರ್ಯದರ್ಶಿ ದೆಬಾಶಿಶ್ ಬಸು ಚೌಧರಿ ಹೇಳಿದ್ದಾರೆ.
ಸೆ.30 ರಂದು ಸಿಬ್ಬಂದಿ ಕಪ್ಪು ಪಟ್ಟಿ ಧರಿಸಲಿದ್ದಾರೆ, ಅ 4 ರಂದು ಎಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ, ಅ 14 ರಂದು ಮುಂಬೈ, ದೆಹಲಿ, ಕೋಲ್ಕತಾ, ಚೆನ್ನೈ, ಹೈದರಾಬಾದ್, ಬೆಂಗಳೂರು ಮತ್ತು ಮಂಗಳೂರಿನಲ್ಲಿ ಧರಣಿ ಮತ್ತು ಅ 21 ರಂದು ಎಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ವೆಂಕಟಾಚಲಂ ಯುಎನ್ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


